Latest

*ಸೆಕ್ಸ್ ಗೆ ನಿರಾಕರಿಸಿದ್ದಕ್ಕೆ ಪತ್ನಿಯನ್ನು ಕೊಚ್ಚಿ ಕೊಲೆಗೈದ ಪತಿ*

ಪ್ರಗತಿವಾಹಿನಿ ಸುದ್ದಿ: ಕೋಪದ ಬರದಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೆರಾ ಗ್ರಾಮದಲ್ಲಿ ನಡೆದಿದೆ.

ನಾಗಮ್ಮ (42) ಪತಿಯಿಂದಲೇ ಕೊಲೆಯಾಗಿರುವ ಪತ್ನಿ. ಶೇಖಪ್ಪ ಪತ್ನಿಯನ್ನೆ ಕೊಂದ ಆರೋಪಿ. ಪತ್ನಿ ಕೊಲೆಗೈದು ಬಳಿಕ ಪೊಲೀಸ್ ಠಾಣೆಗೆ ಬಂದು ಆರೋಪಿ ಶರಣಾಗಿದ್ದಾನೆ.

Home add -Advt

ಪೊಲೀಸರು ವಿಚಾರಣೆ ನಡೆಸಿದಾಗ ಶೇಖಪ್ಪ ಪತ್ನಿಗೆ ರಾತ್ರಿ ಎರಡು ಬಾರಿ ಸೆಕ್ಸ್ ಗೆ ಒತ್ತಾಯಿಸಿದ್ದನಂತೆ. ಅದಕ್ಕೆ ಪತ್ನಿ ನಿರಾಕರಿಸಿದ್ದಾಳೆ. ಇದಕ್ಕೆ ಕೋಪಗೊಂಡ ಶೇಖಪ್ಪ ನಿನ್ನನ್ನು ಕೊಚ್ಚಿ ಹಾಕುತ್ತೇನೆ ಎಂದಿದ್ದಾನಂತೆ. ಕೊಚ್ಚಿ ಹಾಕು ನೋಡೋಣ ಎಂದು ಪತ್ನಿ ತಿರುಗಿ ಮಾತನಾಡಿದ್ದಾಳೆ. ರೊಚ್ಚಿಗೆದ್ದ ಶೇಖಪ್ಪ ಕುಡುಗೋಲಿನಿಂದ ಕೊಚ್ಚಿ ಪತ್ನಿಯನ್ನು ಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button