Latest

ಪ್ರತ್ಯೇಕ ಉತ್ತರಕರ್ನಾಟಕ ರಾಜ್ಯ ಧ್ವಜ ಪ್ರದರ್ಶನ -ಸಿಎಂ ಗೂ ಅರ್ಪಣೆ!

 

 

  ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಆಗ್ರಹಿಸಿ ಮಂಗಳವಾರ ಉತ್ತರ ಕರ್ನಾಟಕ ಹೋರಾಟ ಸಮಿತಿ ನೇತೃತ್ವದಲ್ಲಿ ಸುವರ್ಣ ಗಾರ್ಡನ್ ನಲ್ಲಿ ನಡೆಯುತ್ತಿದ ಪ್ರತಿಭಟನಾ ಸ್ಥಳದಲ್ಲಿ ಪ್ರತ್ಯೇಕ ಉ-ಕ ಧ್ವಜ ಪ್ರದರ್ಶನ ಮಾಡಿದರು. 
ನಂತರ ಕೆಲವು ಹೋರಾಟಗಾರರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಈ ಸಂಬಂಧ ಅಹವಾಲು ಸಲ್ಲಿಸಿದರಲ್ಲದೆ ಉತ್ತರ ಕರ್ನಾಟಕ ನಕ್ಷೆಯನ್ನು ಸಲ್ಲಿಸಿದರು.
ಈ ವೇಳೆ ಮಾತನಾಡಿದ ಉತ್ತರ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ ಗೊಲ್ಲ‌ಶೆಟ್ಟಿ, ರಾಜ್ಯ ಸರಕಾರ ಉತ್ತರ ಕರ್ನಾಟಕದ 13 ಜಿಲ್ಲೆಗಳ ಅಭಿವೃದ್ಧಿ ಕಡೆಗಣಿಸುತ್ತಿದೆ. ಈ ಹಿಂದೆ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ಅವರು ವಿವಿಧ ಪ್ರಮುಖ ಇಲಾಖೆಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡುವ ಭರವಸೆ ನೀಡಿದರು. ಆದರೆ, ಇಲ್ಲಿವರೆಗೆ ಯಾವುದೇ ಕ್ರಮಕೈಗೊಂಡಿಲ್ಲ. ಆದ್ದರಿಂದ ಬೇಡಿಕೆ ಈಡೇರಿಸದಿದ್ದರೆ ಉಕ ಪ್ರತ್ಯೇಕ ರಾಜ್ಯ ಹೋರಾಟ ಮಾಡಲಾಗುವುದು ಎಂದು ಹೇಳಿದಂತೆ, ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು. 
ಜಿಲ್ಲಾಧ್ಯಕ್ಷ ಅಡವೇಶ ಇಟಗಿ ಮಾತನಾಡಿ, ಸಿಎಂ ಕುಮಾರಸ್ವಾಮಿ ಅವರು ಕಚೇರಿ ಸ್ಥಳಾಂತರ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು. ಆದರೆ, ಯಾವುದೇ ಬೇಡಿಕೆ ಈಡೇರಿಸಿಲ್ಲ. ಆದ್ದರಿಂದ ಪ್ರತ್ಯೇಕ ಉ-ಕ ಹೋರಾಟ ಮಾಡುತ್ತೇವೆ. ಪ್ರತ್ಯೇಕ ಧ್ವಜರೋಹಣ ಮಾಡಲು ಅಡ್ಡಿ ಉಂಟು ಮಾಡುತ್ತಿದ್ದಾರೆ. ಆದರೆ, ಬಿಡುವುದಿಲ್ಲ ಪ್ರತ್ಯೇಕ ಉಕ ಧ್ವಜಾರೋಹಣ ಮಾಡುತ್ತೇವೆ ಎಂದರು.
ಇದೇ ವೇಳೆ ಸುವರ್ಣ ವಿಧಾನಸೌಧದಲ್ಲಿ ಕೆಲವು ಹೋರಾಟಗಾರರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಉತ್ತರ ಕರ್ನಾಟಕ ನಕ್ಷೆ ಸಲ್ಲಿಸಿ, ಅನ್ಯಾಯ ಮುಂದುವರಿದರೆ ಪ್ರತ್ಯೇಕ ರಾಜ್ಯಕ್ಕಾಗಿ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button