Latest

*ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಚಕ್ ಬೌನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.

ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್ ಜಡ್ಜ್ ಹಾಗೂ ಜೆ ಎಂಎಫ್ ಸಿ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಸ್ನೇಹಮಯಿ ಕೃಷ್ಣ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡುವಂತೆ ಆದೇಶಿಸಿದೆ.

ಎನ್.ಕುಮಾರ್ ಎಂಬುವವರು 2015ರ ಜೂನ್ 30ರಂದು ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button