Karnataka News

*ಹುಚ್ಚುನಾಯಿ ದಾಳಿ: 3 ವರ್ಷದ ಮಗುವಿನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೀದಿನಾಯಿ, ಹುಚ್ಚುನಾಯಿಗಳ ಹಾವಳಿ ಹೆಚ್ಚುತ್ತಿದ್ದು, ದಿನಕ್ಕೊಂದು ಪ್ರಕರಣಗಳು ನಡೆಯುತ್ತಿವೆ. ನಿನ್ನೆ ಕೊಪ್ಪಳದಲ್ಲಿ ಮೂವರು ವಿದ್ಯಾರ್ಥಿಗಳ ಮೇಲೆ ಬೀದಿ ನಾಯಿ ದಾಳಿ ನಡೆಸಿ, ಕಚ್ಚಿ ಗಾಯಗೊಳಿಸಿದ್ದ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಇಂದುಬಾಗಲ ಕೋಟೆಯಲ್ಲಿ ಹುಚ್ಚುನಾಯಿಯೊಂದು ಮಗುವಿನ ಮೇಲೆ ದಾಳಿ ನಡೆಸಿದೆ.

ಮೂರು ವರ್ಷದ ಗಂಗಾಧರ ಎಂಬ ಮಗುವಿನ ಮೇಲೆ ಹುಚ್ಚುನಾಯಿ ದಾಳಿ ನಡೆಸಿ, ಕಚ್ಚಿ ಗಾಯಗೊಳೀಸಿದೆ. ಈ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಶಾಲೆಯ ಹಿಂಭಾಗದಲ್ಲಿ ನಡೆದಿದೆ.

ಮಗು ಗಂಗಾಧರನ ಮುಖ, ತುಟಿ, ಕೆನ್ನೆ, ಬಲಗಣ್ಣು, ಕಿವಿಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಘಟನಾ ಸ್ಥಳಗಳತ್ತ ತಿರುಗಿಯೂ ನೋಡುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button