ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಗಾ, ಹೊನ್ನಿಹಾಳ, ಹುದಲಿ, ಖನಗಾಂವ ಕೆಎಚ್ ಗ್ರಾಮಗಳಲ್ಲಿ ನಡೆದ ಮನೆ ಕಳ್ಳತನ ಪ್ರಕರಣ ಪತ್ತೆ ಹಚ್ಚಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಬಂಧಿಸಿ ಒಟ್ಟು 7,80,000 ರೂ ಬೆಲೆಯ ಬಂಗಾರದ ಮತ್ತು ಬೆಳ್ಳಿಯ ಆಭರಣಗಳು ಮತ್ತು ಕಳ್ಳತನಕ್ಕೆ ಉಪಯೋಗಿಸಿದ 2 ಮೋಟರ್ ಸೈಕಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಎ-1 ಬಸಪ್ಪ @ ಪರಾರಿ ಬಸ್ಯಾ ಮಾರುತಿ ಕರಕಾಳಿ (36) ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪೊಲೀಸರ ತನಿಖೆ ವೇಳೆ ಸುಳೇಭಾವಿ- ಖನಗಾಂವ ರಸ್ತೆಯಲ್ಲಿರುವ ರೈಲ್ವೇ ಓವರ್ ಬ್ರಿಡ್ಜ್ ಹತ್ತಿರ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ವಿಚಾರಣೆಗೆ ಒಳಪಡಿಸಿದಾಗ ಮನೆ ಕಳ್ಳತನ ಮಾಡಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಲ್ಲದೇ ಆರೋಪಿತನು ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆ ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ
ಆರೋಪಿಯಿಂದ ಸುಮಾರು 6,30,000 ರೂ ಬೆಲೆಯ ಬಂಗಾರದ ಮತ್ತು 50,000 ರೂ ಬೆಲೆಯ ಬೆಳ್ಳಿಯ ಆಭರಣಗಳನ್ನು ಮತ್ತು 1,00,000 ರೂ ಕಿಮ್ಮತ್ತಿನ 2 ಮೋಟರ ಸೈಕಲ್ ಗಳನ್ನು ಜಪ್ತು ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ