National

*ಟ್ರ್ಯಾಕ್ಟರ್-ಲಾರಿ ಅಪಘಾತ: 10 ಜನರು ದುರ್ಮರಣ*

ಟ್ರ್ಯಾಪ್ರಗತಿವಾಹಿನಿ ಸುದ್ದಿ: ಕ್ಟರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನರು ಸಾವನ್ನಪ್ಪಿರ್ವ ಘಟನೆ ಉತ್ತರಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.

ಅಪಘಾಅದಲ್ಲಿ ಮೂವರು ಗಾಯಗೊಂಡಿದ್ದಾರೆ. 13ಕ್ಕೂ ಹೆಚ್ಚು ಕಾರ್ಮಿಮಿಕರನ್ನು ಹೊತ್ತ ಟ್ರ್ಯಾಕ್ಟರ್ ಟ್ರಾಲಿಯು ಮಿರ್ಜಾಪುರ-ವಾರಣಾಸಿ ಗಡಿಯಲ್ಲಿ ಕಚವಾನ್ ಮತ್ತು ಮಿರ್ಜಾಮುರಾದ್ ನಡುವೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪಘತದಲ್ಲಿ 10 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಮೂರು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button