Karnataka NewsLatest

*ಲಾಡ್ಜ್ ನಲ್ಲೇ ಆತ್ಮಹತ್ಯೆಗೆ ಶರಣಾದ ಸರ್ಕಾರಿ ಶಾಲೆ ಶಿಕ್ಷಕ*

ಪ್ರಗತಿವಾಹಿನಿ ಸುದ್ದಿ: ಶಿಕ್ಷಕರೊಬ್ಬರು ಲಾಡ್ಜ್ ರೂಮಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯ ಗೋಕುಲ್ ಲಾಡ್ಜ್ ನಲ್ಲಿ ನಡೆದಿದೆ.

57 ವರ್ಷದ ರಂಗಸ್ವಾಮಿ ಆತ್ಮಹತ್ಯೆ ಮಾಡಿಕೊಂಡವರು. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇದೆ. ಆದರೆ ಆತ್ಮಹತ್ಯೆಯಂತಹ ದುಡುಕಿನ ನಿರ್ಧರ ಕೈಗೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ.

Home add -Advt

ಮೃತ ರಂಗಸ್ವಾಮಿ ಬೇಲೂರು ತಾಲೂಕಿನ ತೊಳಲು ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದರು. ನಿನ್ನೆ ಗೋಕುಲ್ ಲಾಡ್ಜ್ ನಲ್ಲಿ ರೂಂ ಪಡೆದು ತಂಗಿದ್ದರು. ಇಂದು ಏಕಾಏಕಿ ಲಾಡ್ಜ್ ರೂಮಿನಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ.

ಕೆ.ಆರ್.ಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button