ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನದ ಕರಾಚಿಯಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಜಿನ್ನಾ ಏರ್ ಪೋರ್ಟ್ ಮುಂಭಾಗದಲ್ಲಿ ಭಾರಿ ಸ್ಪೋಟವೊಂದು ಸಂಭವಿಸಿದ್ದು, 5 ಮಂದಿ ಮೃತರಾಗಿ, 17 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.
ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ ಹಾಗೂ ಮಿಲಿಟರಿ ಕಮಾಂಡೋಗಳು ಭೇಟಿ ನೀಡಿದ್ದು, ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ. ಭಾನುವಾರ ತಡರಾತ್ರಿ ದುರಂತ ಸಂಭವಿಸಿದೆ. ವಿದೇಶಿ ಪ್ರಜೆಗಳನ್ನು ಗುರಿಯಾಗಿಸಿ ಸ್ಫೋಟ ಸಂಭವಿಸಿದೆ.
ತೈಲ ಟ್ಯಾಂಕರ್ ಒಳಗೆ ಬ್ಲಾಸ್ಟ್ ಆಗಿದ್ದು, ಸ್ಫೋಟಕ್ಕೆ ಯಾವ ವಸ್ತು ಬಳಸಲಾಗಿದೆ ಎಂಬುದು ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಐಇಡಿ ಬಾಂಬ್ ಬ್ಲಾಸ್ಟ್ ಇರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗುತ್ತಿದೆ. ಸ್ಫೋಟದ ತೀವ್ರತೆ ಹೆಚ್ಚಿದ್ದು ಭಾರಿ ಶಬ್ದ ಕೇಳಿಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಬಲೂಚಿಸ್ಥಾನ ಲಿಬರೇಷನ್ ಆರ್ಮಿ ದಾಳಿಯ ಹೊಣೆ ಹೊತ್ತಿಕೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ