ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಡಿವೈ ಎಸ್ ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಬಿಟ್ ಕಾಯಿನ್ ಪ್ರಕರಣದ ತನಿಖೆ ವೇಳೆ ಎವಿಡೆನ್ಸ್ ಟ್ಯಾಂಪರಿಂಗ್ ಮಾಡಿದ್ದ ಆರೋಪದಲ್ಲಿ ಡಿವೈ ಎಸ್ ಪಿ ಶ್ರೀಧರ್ ಪೂಜಾರ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಕರೆಸಲಾಗಿತ್ತು. ವಿಚಾರಣೆ ಬಳಿಕ ಸಿಐಡಿ ಕಚೇರಿಯಲ್ಲಿಯೇ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.
ಬಿಟ್ ಕಾಯಿನ್ ಹಗರಣದ ತನಿಖೆಗೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಬಳಿಕ ಶ್ರೀದರ್ ಪೂಜಾರ್ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಬಿಟ್ ಕಾಯಿನ್ ಕೇಸ್ ನಲ್ಲಿ ಡಿವೈಎಸ್ ಪಿ ಶ್ರೀಧರ್ ಪೂಜಾರ್, ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ