Karnataka News

*ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ RTO ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಬೆಳಗಾವಿ, ಕೋಲಾರ, ಬೀದರ್, ವಿಜಯಪುರ, ಬಳ್ಳಾರಿ ಜಿಲ್ಲೆಗಳ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿಯ ನಿಪ್ಪಾಣಿಯ ಕೊಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರ ಬಳಿಯ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕೋಲಾರದ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್ ಟಿ ಒ ಚೆಕ್ ಪೋಸ್ಟ್, ಮುಳಬಾಗಿಲು ತಾಲೂಕಿನ ನಂಗುಲಿ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಎಸ್ ಪಿ ಧನಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.

ಬೀದರ್ ನ ಹುಮ್ನಾಬಾದ್, ವಿಜಯಪುರದ ಚಡಚಣದ ಧೂಳಖೇಡ್ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button