Election NewsNationalPolitics

*ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವು ಸಾಧಿಸಿದ ಕುಸ್ತಿಪಟು ವಿನೇಶ್ ಫೋಗಟ್*

ಪ್ರಗತಿವಾಹಿನಿ ಸುದ್ದಿ: ಹರಿಯಾಣಾದ ಜೂಲಾನಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಗೆಲುವು ಸಾಧಿಸಿದ್ದು, ಮೊದಲ ಚುನಾವಣೆಯಲ್ಲಿಯೇ ಗೆದ್ದು ಬೀಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ವಿರುದ್ಧ ವಿನೇಶ್ ಫೋಗಟ್ ಐದು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆರಂಭಿಕ ಮತ ಎಣಿಕೆಯಲ್ಲಿ ವಿನೇಶ್ ಮುನ್ನಡೆಯಲ್ಲಿದ್ದರೂ ಬಳಿಕ ಯೋಗೇಶ್ ಕುಮಾರ್ ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ಅಂತಿಮ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

Home add -Advt

ಹರಿಯಾಣದ ಚುನಾವಣೆಯಲ್ಲಿ ಕಿಸಾನ್, ಜವಾನ್, ಪೈಲ್ವಾನ್ ಘೋಷವಾಕ್ಯವನ್ನಿಟ್ಟುಕೊಂಡು ಕಾಂಗ್ರೆಸ್ ಚುನಾವಣೆ ಎದುರಿಸಿತ್ತು. ಇದೀಗ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿರುವ ವಿನೇಶ್ ಫೋಗಟ್ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಲಿದ್ದಾರೆ.

Related Articles

Back to top button