Karnataka NewsLatest

*ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಜಾಸ್ತಿಯೇ ಇರಬಹುದು. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದಿನ ಬಿಟ್ಟು ದಿನ ಕರಾವಳಿ ಜಿಲ್ಲೆಗಳಲ್ಲಿ ಒಕ್ಟೊಬರ್ 15ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಗುಡುಗು ಸಹಿತ ಮಳೆಯು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ( ಅಥಣಿ ಸಹಿತ), ಗದಗ, ದಾವಣಗೆರೆ, ಬಳ್ಳಾರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದಿನ ಬಿಟ್ಟು ದಿನ ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರದ ದಕ್ಷಿಣ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಉಂಟಾಗಿದೆ ಮತ್ತು ಮುಂದಿನ 2 ಮೂರು ದಿನಗಳಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈ ಎರಡರ ಪರಿಣಾಮ ಕಾದು ನೋಡಬೇಕಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button