ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಕನ್ನಡ ಸೀಜನ್-11 ನಡೆಯುತ್ತಿದ್ದು, ಬಿಗ್ ಬಾಸ್ ಆಯೋಜಕರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಅವರ ಸೂಚನೆ ಮೇರೆಗೆ ಬಿಗ್ ಬಾಸ್ ಆಯೋಜಕರಿಗೆ ನೋಟಿಸ್ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮಾನವ ಹಕ್ಕುಗಳ ಉಲ್ಲಂಘನೆ, ಮಹಿಳೆಯರ ಸನ್ಮಾನಕ್ಕೆ ಧಕ್ಕೆ, ಮಹಿಳೆಯರಿಗೆ ಕನಿಷ್ಠ ಮೂಲಭೂತ ಸೌಲಭ್ಯವಿಲ್ಲದ ರೀತಿಯಲ್ಲಿ ಸ್ಪರ್ಧೆಗಳ ಆಯೋಜನೆ ಮಾಡಲಾಗಿರುವ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ಬಂದ ಹಿನ್ನೆಲೆಯಲ್ಲಿ ಮಹಿಳಾ ಆಯೋಗ ಸೂಚನೆ ನೀಡಿದ್ದು, ಕುಂಬಳಗೋಡು ಪೊಲೀಸರು ಬಿಗ್ ಬಾಸ್ ಆಯೋಜಕರಿಗೆ ದೂರು ನೀಡಿದ್ದಾರೆ.
ಅಲ್ಲದೇ ಪೊಲೀಸ್ ಅಧಿಕಾರಿಗಳು ಬಿಗ್ ಬಾಸ್ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಆಯೋಗ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ