Karnataka News

*ಬೀದಿ ನಾಯಿಗಳ ಅಟ್ಟಹಾಸ: 11 ವರ್ಷದ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಟ್ಯೂಷನ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ ಬಾಲಕನ ಮೇಲೆ ಬೀದಿ ನಾಯಿಗಳು ದಳಿ ನಡೆಸಿದ್ದು, ಬಾಲಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

11 ವರ್ಷದ ಮಿಥುನ್ ಬೀದಿ ನಾಯಿಗಳ ದಾಳಿಗೆ ಬಲಿಯಾಗಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Home add -Advt

ಮಿಥುನ್ ಟ್ಯೂಷನ್ ಕ್ಲಾಸ್ ಗೆ ಹೋಗಿ ವಾಪಾಸ್ ಆಗುತ್ತಿದ್ದ. ಈ ವೇಳೆ ಬೀದಿ ನಾಯಿಗಳು ದಾಳಿ ನಡೆಸಿ ಬಾಲಕನ ತಲೆ, ಕೆನ್ನೆ, ಮೈಕಚ್ಚಿ ಗಾಯಗೊಳಿಸಿವೆ. ಇದನ್ನು ಕಂಡ ಆಟೋ ಚಾಲಕರೊಬ್ಬರು ಬಾಲಕನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಬಾಲಕ ಸಾವನ್ನಪ್ಪಿದ್ದಾನೆ.


Related Articles

Back to top button