ಪ್ರಗತಿವಾಹಿನಿ ಸುದ್ದಿ: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ಇನ್ನೂ ಮೂರು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜನರು ಸುರಕ್ಷಿತವಾಗಿರಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ತುಮಕೂರು ಕೊಡಗು, ಕೋಲಾರ, ರಾಮನಗರ, ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ಇದ್ದು ಇಂದಿನಿಂದ ನಾಳೆಯವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ