ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕಂಟಕ ಎದುರಾಗಿದೆ. ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ.
ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಕೋರ್ಟ್ ಮ್ಯಾಜಿಸ್ಟ್ರೇಟ್ ಕೆಎನ್ ಶಿವಕುಮಾರ್ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದ್ದಾರೆ.
ಈ ಹಿಂದೆ ಯತ್ನಾಳ್ ಅವರು ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರನ್ನು ಉಲ್ಲೇಖಿಸಿ, ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಹಿನ್ನೆಲೆ ಟಬು ಅವರು ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ