National

*ವಿಸ್ತಾರಾ ಫ್ಲೈಟ್ ಗೆ ಬಾಂಬ್ ಬೆದರಿಕೆ: ತುರ್ತು ಲ್ಯಾಂಡ್ ಆದ ವಿಮಾನ*

ಪ್ರಗತಿವಾಹಿನಿ ಸುದ್ದಿ: ಫ್ರಾಂಕ್ ಫರ್ಟ್ ನಿಂದ ಮುಂಬೈಗೆ ಆಗಮಿಸುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಮುಂಬೈನಲ್ಲಿ ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡ್ ಮಾಡಲಾಗಿದೆ.

UK 028ರ ವಿಮಾನ ಪಾಕಿಸ್ತಾನದ ಮೇಲೆ ಹಾರಾತ ನದೆಸುತ್ತಿದ್ದ ವೇಳೆ ಬಾಂಬ್ ಬೆದರಿಕೆ ಕರೆ ಬಂದಿದೆ. ಬಳಿಕ ವಿಮಾನವನ್ನು ಬೆಳಿಗ್ಗೆ 7:40ರ ಸುಮಾರಿಗೆ ತುರ್ತು ಪರಿಸ್ಥಿತಿ ಸೂಚಿಸಿ ಮುಂಬೈನಲ್ಲಿ ಲ್ಯಾಂಡ್ ಮಾಡಲಾಯಿತು. ಪರಿಶೀಲನೆ ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದೆ.

ಸೋಮವಾರ ಭಾರತೀಯ ವಿಮಾನ ಸಂಸ್ಥೆಯ ಮೂರು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿವೆ. ಮಂಗಳವಾರ ಹತ್ತು ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಬುಧವಾರ 6 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ಇದೆಲ್ಲವೂ ಹುಸಿ ಬಾಂಬ್ ಬೆದರಿಕೆ ಕರೆಗಳು ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button