*ಶಿವಸೇನೆಗೆ ಸೇರಿದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ*
ಪ್ರಗತಿವಾಹಿನಿ ಸುದ್ದಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಲ್ಕರ್ ರಾಜಕೀಯ ಪ್ರವೇಶವಾಗಿದೆ. ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಬಣದ ಶಿವಸೇನೆಗೆ ಸೇರ್ಪಡೆಗೊಂಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಎಲೆಕ್ಷನ್ ಸನಿಹದಲ್ಲಿ ಇರೋ ಬೆನ್ನಲ್ಲೇ ಈ ಬೆಳವಣಿಗೆ ಸಾಕಷ್ಟು ಮಹತ್ವ ಪಡೆದಿದೆ. ಶ್ರೀಕಾಂತ್ ಬಹಳ ಹಿಂದೆ ಶಿವ ಸೈನಿಕನಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಗೌರಿ ಲಂಕೇಶ್ ಕೊಲೆ ಕೇಸ್ ನ ಪ್ರಮುಖ ಆರೋಪಿಯಾಗಿದ್ದು, ಕಳೆದ ತಿಂಗಳಷ್ಟೇ ಕರ್ನಾಟಕ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಸದ್ಯ ಶ್ರೀಕಾಂತ್ ರನ್ನ ಜಲ್ನ ಕ್ಷೇತ್ರದ ಪ್ರಚಾರ ವಿಭಾಗದ ಮುಖ್ಯಸ್ಥನ ಸ್ಥಾನ ನೀಡಲಾಗಿದೆ.
2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಅವರ ನಿವಾಸದ ಎದುರು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಹಾರಾಷ್ಟ್ರದ ಏಜೆನ್ಸಿಗಳ ಸಹಾಯದಿಂದ ಕರ್ನಾಟಕದಲ್ಲಿ ಪೊಲೀಸರು ನಡೆಸಿದ ತನಿಖೆಯು ಹಲವರನ್ನು ಬಂಧಿಸಲಾಗಿತ್ತು. 2001 ಮತ್ತು 2006 ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಪುರಸಭೆಯ ಕೌನ್ಸಿಲರ್ ಆಗಿದ್ದ ಪಂಗರ್ಕರ್ ಅವರನ್ನು ಆಗಸ್ಟ್ 2018 ರಲ್ಲಿ ಬಂಧಿಸಲಾಗಿತ್ತು. ಈ ವರ್ಷ ಸೆಪ್ಟೆಂಬರ್ 4 ರಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. 2011ರಲ್ಲಿ ಶಿವಸೇನೆಯಿಂದ ಟಿಕೆಟ್ ನಿರಾಕರಿಸಿದ ನಂತರ, ಪಂಗರ್ಕರ್ ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಗೆ ಸೇರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ