Education

*8, 9, 10ನೇ ತರಗತಿಗಳಿಗೆ ಅರ್ಧ ವಾರ್ಷಿಕ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ: 8, 9 ಹಾಗೂ 10ನೇ ತರಗತಿಗಳಿಗೆ ಅರ್ಧ ವಾರ್ಷಿಕ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಪರೀಕ್ಷಾ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಸರ್ವೋಚ್ಚನಾಯಾಲಯ ಸೂಚನೆನೀಡಿದೆ.

8, 9 ಹಾಗೂ 10ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಯಂತೆ ಅರ್ಧವಾರ್ಷಿಕ ಪರೀಕ್ಷೆ ನಡೆಸಿದ ರಾಜ್ಯ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಸುಪ್ರೀಂ ಕೋರ್ಟ್ ನ ನ್ಯಾ.ಬೇಲಾ ತ್ರಿವೇದಿ ಅವರಿದ್ದ ಪೀಠ 8, 9 ಹಾಗೂ 10ನೇ ತರಗತಿಗಳ ಅರ್ಧ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಆದೇಶ ಹೊರಡಿಸಿದೆ.

ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳನ್ನು ನಡೆಸಿ ವಿದ್ಯಾರ್ಥಿಗಳಿಗೆ ಏಕೆ ತೊಂದರೆ ಕೊಡುತ್ತೀರಿ? ರಾಜ್ಯ ಸರ್ಕಾರವೇ ಈ ರೀತಿ ವರ್ತಿಸಿದರೆ ಹೇಗೆ? ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬೇಡಿ. ನಿಮಗೆ ನಿಜವಾಗಿಯೂ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದರೆ ಒಳ್ಳೆಯ ಶಾಲೆಗಳನ್ನು ತೆರೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. ಕರ್ನಾಟಕ ಸರ್ಕಾರ ಅನುಸರಿಸುತ್ತಿರುವ ಶಿಕ್ಷಣದ ಮಾದರಿಯನ್ನು ಬೇರೆ ಯಾವ ರಾಜ್ಯಗಳೂ ಅನುಸರಿಸುತ್ತಿಲ್ಲ. ಬೋರ್ಡ್ ಪರೀಕ್ಷೆ ಮಾದರಿಯಲ್ಲಿ ಅರ್ಧವಾರ್ಷಿಕೆ ಪರೀಕ್ಷೆ ನಡೆಸಿದ್ದು ಸರಿಯಲ್ಲ ಎಂದು ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button