ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯತ್ವಕ್ಕೆ ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸಿ.ಪಿ.ಯೋಗೇಶ್ವರ್ ಘೋಷಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಪರುಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿಯಾಗಿ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಮಾತನಾಡಿದ ಯೋಗೇಶ್ವರ್, ನಾನು ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಅಷ್ಟೇ. ಆದರೆ ಇನ್ನೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ ಎಂದರು.
ಎನ್ ಡಿಎ ಅಭ್ಯರ್ಥಿಯಾಗಿಯೇ ಚನ್ನಪಟ್ಟಣ ಕ್ಷೇತ್ರಕ್ಕೆ ಸ್ಪರ್ಧಿಸಬೇಕು ಎಂಬ ಆಸೆಯಿತ್ತು. ಈಗಲೂ ನಾನು ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧ. ಈ ನಿಟ್ಟಿನಲ್ಲಿ ನನಗೊಂದು ಅವಕಾಶ ನೀಡುವಂತೆ ಕೇಳಿದ್ದೇನೆ. ಆದರೆ ಹೆಚ್ಚಿನ ಕಾಲವಕಾಶವಿಲ್ಲದಿರುವುದೈಂದ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಎನ್ ಡಿಎ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದರು.
ಚನ್ನಪಟ್ಟಣ ಕುಮಾರಾಸ್ವಾಮಿಯವರ ಕ್ಷೇತ್ರ. ಹಾಗಾಗಿ ಅವರು ತನ್ನ ಕ್ಷೇತ್ರಕ್ಕೆ ಮಗನನ್ನು ನಿಲ್ಲಿಸಬೇಕ್ಲು ಎಂಬ ಅವರ ಆಸೆ ಸ್ವಾಭಾವಿಕ. ಹಾಗಿರುವಾಗ ಈ ಬಗ್ಗೆ ನಾನೇನೂ ಹೇಲಲು ಆಗುವುದಿಲ್ಲ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ತೀರ್ಮಾನಿಸಿದ್ದೇನೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ