ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನರು ಕಂಗೆಟ್ಟು ಹೋಗಿದ್ದಾರೆ. ಮಳೆ ಅಬ್ಬರಕ್ಕೆ ಸೃಷ್ಟಿಯಾಗಿರುವ ಅವಾಂತರಗಳು, ಅನಾಹುತಗಳು ಒಂದೆರಡಲ್ಲ. ಈ ನಡುವೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಕೊಂಚ ಬಿಡುಪಡೆದಿದ್ದ ಮಳೆರಾಯ ಮಧ್ಯಾಹ್ನದ ಬಳಿಕ ಗುಡುಗು ಸಿಡಿಲಿನೊಂದಿಗೆ ಅಬ್ಬರಿಸ ತೊಡಗಿದ್ದಾನೆ. ಅದರಲ್ಲಿಯೂ ಮಲ್ಲೇಶ್ವರಂ ನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು, ರಾಮನಗರ, ಆನೇಕಲ್ ಸೇರಿದಂತೆ ಸುತ್ತಮುತ್ತಲ ಜಿಲ್ಲೆಯಲ್ಲಿ ಮಳೆ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಚಿಕ್ಕಬಳ್ಳಾಪುರ, ರಾಮನಗರ, ಆನೇಕಲ್ ನಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೀಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಹಾಗೂ ನಾಳೆ ಅತಿ ಹೆಚ್ಚು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ