ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ನಡುವೆ ಪ್ರಕರಣ ಸಂಬಂಧ ಕಟ್ಟಡದ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ನಿನ್ನೆ ಸಂಜೆ ಸುರಿದ ಮಳೆಯ ಅಬ್ಬರಕ್ಕೆ ಕುಸಿದು ಬಿದ್ದಿತ್ತು. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಕೊಂಡಿದ್ದು, ಈವರೆಗೆ 6 ಕಾರ್ಮಿಕರ ಮೃತದೇಹ ಹೊರತೆಗೆಯಲಾಗಿದೆ. ರಕ್ಷಣಾ ತಂಡದಿಂದ ಕಾರ್ಯಾಚರಣೆ ಮುಂದುವರೆದಿದೆ.
ಇದೇ ವೇಳೆ ಕಟ್ಟದ ಮಾಲೀಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರ ಮುನಿಯಪ್ಪ ಎಂಬುವವರನ್ನು ಬಂಧಿಸಲಾಗಿದೆ. ಕಟ್ಟಡ ಮಾಲೀಕ 4 ಅಂತಸ್ತುಗಳ ಕಟ್ಟಡಕ್ಕೆ ಅನುಮತಿ ಪಡೆದು 6 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದು, ಅವೈಜ್ಞಾನಿಕ ಕಟ್ಟಡ ನಿರ್ಮಾಣವೆ ದುರಂತಕ್ಕೆ ಕಾರಣ ಎಂದು ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ