ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣ ಉಪಚುನಾವಣಾ ಅಖಾಡ ರಾಜಕೀಯ ರಣಕಣವಾಗಿ ಮಾರ್ಪಟ್ಟಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸಿರುವ ಬೆನ್ನಲ್ಲೇ ಎನ್ ಡಿಎ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತುಹೂಲಕ್ಕೆ ಬಹುತೇಕ ಬ್ರೇಕ್ ಬಿದ್ದಿದೆ. ಉಪಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಮೂಲಕ ನಿಖಿಲ್ ಸ್ಪರ್ಧೆ ಖಚಿತವಾಗಿದೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ತಾನು ಉಪಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧನಿದ್ದೇನೆ ಎಂದಿದ್ದಾರೆ.
ನಿಮ್ಮೆಲ್ಲರ ಒತ್ತಡಕ್ಕೆ ಮಣಿದು, ನಾನು ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧನಿದ್ದೇನೆ. ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒಪ್ಪಿದ್ದೇನೆ ಎಂದು ನಿಖಿಲ್ ತಿಳಿಸಿದ್ದಾರೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರದಿಂದ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧೆ ಸ್ಪಷ್ಟವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ