ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ
ಪ್ರಗತಿವಾಹಿನಿ ಸುದ್ದಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅ.24ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್, ಪ್ರಕರಣದ ಎಲ್ಲಾ 6 ಕೇಸ್ ಗಳಲ್ಲಿಯೂ ಅಂಕೋಲಾ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿದ್ದರು. ಶಿಕ್ಷೆ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿದ್ದರು.
ಇದೀಗ ನ್ಯಾ.ಸಂತೋಷ್ ಗಜಾನನ ಭಟ್ ಆರೋಪಿಗಳ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ಮೊದಲ ಕೇಸ್ ನಲ್ಲಿ ಶಾಸಕ ಸತೀಶ್ ಸೈಲ್ ಗೆ 5 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ್ದಾರೆ. 2ನೇ ಕೇಸ್ ನಲ್ಲಿ 3ವರ್ಷ ಜೈಲು ಶಿಕ್ಷೆ ಹಾಗೂ 9 ಕೋಟಿ 60 ಲಕ್ಷ ಡಂಡ ವಿಧಿಸಲಾಗಿದೆ.
3ನೇ ಕೇಸ್ 420, ವಂಚನೆ ಪ್ರಕರಣದಲ್ಲಿ ಸತೀಶ್ ಸೈಲ್ ಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. 4ನೇ ಕೇಸ್ ನಲ್ಲಿ ಕೂಡ ಸತೀಶ್ ಸೈಲ್ ಗೆ 5 ವರ್ಷ ಜೈಲು ಶಿಕ್ಷೆ ಪ್ರಕಟಿಸಲಾಗಿದೆ. 5ನೇ ಕೇಸ್ ನಲ್ಲಿಯೂ 7 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಒಟ್ಟು 6 ಪ್ರಕರಣಗಳಲ್ಲಿ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. 44 ಕೋಟಿ ರೂಪಾಯಿಗೂ ಹೆಚ್ಚು ದಂಡ ವಿಧಿಸಲಾಗಿದೆ.
ಪ್ರಕರಣದಲ್ಲಿ ಮಹೇಶ್ ಬಿಳಿಯೆ, ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್, ಖಾರದಪುಡಿ ಮಹೇಶ್, ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿಗೂ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ