*ರೈತರ ಪಹಣಿಯಲ್ಲಿ ವಕ್ಫ್ ಹೆಸರು: ಕೋಮುಗಲಭೆ ಎಬ್ಬಿಸಲು ಸಚಿವರು ಹೀಗೆ ಮಾಡುತ್ತಿದ್ದಾರೆ: ಯತ್ನಾಳ್ ಗಂಭೀರ ಆರೋಪ*
ಪ್ರಗತಿವಾಹಿನಿ ಸುದ್ದಿ: ವಿಜಯಪುರದ ಹೊನವಾಡ ಗ್ರಾಮದ ರೈತರ 1200 ಎಕರೆ ಭೂಮಿಯನ್ನು ವಕ್ಫ್ ಬೋರ್ಡ್ ಗೆ ಸೇರ್ಪಡೆಯಾಗಿದೆ. ಅಲ್ಪ ಸಂಖ್ಯಾತರ ಮತ ಓಲೈಕೆಗಾಗಿ ರಾಜ್ಯ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, 1200 ಎಕರೆ ರೈತರ ಭೂಮಿಯನ್ನು ವಕ್ಫ್ ಬೋರ್ಡ್ ಗೆ ಸೇರಿಸಲಾಗಿದೆ. ಆದರೆ ಮೊನ್ನೆ ಕೇವಲ 11 ಸಾವಿರ ಎಕರೆ ಜಾಗ ಮಾತ್ರ ವಕ್ಫ್ ಜಾಗ ಎಂದರು. ಈಗ 15 ಸಾವಿರ ಎಕರೆ ಎಂದು ಹೇಳುತ್ತಿದ್ದಾರೆ. ಹೀಗೇ ಬಿಟ್ಟರೆ ದೇವಸ್ಥಾನ, ವಿಧಾನಸೌಧ ನಮ್ಮದು ಎಂದು ಹೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೋಮುಗಲಭೆ ಸೃಷ್ಟಿ ಮಾಡಲೆಂದು ಸಚಿವ ಜಮೀರ್ ಅಹ್ಮದ್, ಸಚಿವ ಎಂ.ಬಿ.ಪಾಟೀಲ್ ಈ ರೀತಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಪಾಕಿಸ್ತಾನ ನಿರ್ಮಾಣ ಮಾಡುವಂತೆ ವಕ್ಫ್ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಎಲ್ಲವೂ ವಕ್ಫ್ ಆಸ್ತಿ ಎಂದು ಹೇಳುತ್ತಾರೆ. ಹಾಗಾದರೆ ಹಿಂದೂಗಳು ಎಲ್ಲಿಗೆ ಹೋಗಬೇಕು? ಎಂದು ಪ್ರಶ್ನಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ