Belagavi NewsBelgaum NewsKannada NewsKarnataka News

*ಕಿತ್ತೂರು ಉತ್ಸವದಲ್ಲಿ ಭಾಗವಹಿಸಿದ್ದ ಕಲಾವಿದ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಶನಿವಾರದಂದು ಚನ್ನಮ್ಮನ ಕಿತ್ತೂರು ಉತ್ಸವ ಅಂಗವಾಗಿ ಏರ್ಪಡಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆಯೊಂದು ನಡೆದಿದೆ.

ಕಿತ್ತೂರು ಉತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಭಜನಾ ಕಾರ್ಯಕ್ರಮ ಏರ್ಪಡಿಸಿದ್ದರು. ಈ ವೇಳೆ ಭಜನೆ ಮುಗಿಸಿ ವೇದಿಕೆಯಿಂದ ಕೆಳಗೆ ಇಳಿಯುವಾಗ ಬಸಾಪುರ ಗ್ರಾಮದ ಈರಪ್ಪ ಫಕೀರಪ್ಪ ಬಬ್ಲಿ (48) ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.

Home add -Advt

ಈರಪ್ಪ ಫಕೀರಪ್ಪ ಬಬ್ಲಿ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಆಗಲಿದ್ದು, ಮೃತರ ಮನೆಗೆ ಶಾಸಕ ಬಾಬಾಸಾಹೇಬ ಪಾಟೀಲ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Related Articles

Back to top button