ಪ್ರಗತಿವಾಹಿನಿ ಸುದ್ದಿ : ಕೇರಳದ ಪ್ರಸಿದ್ದ ಹಬ್ಬಗಳಲ್ಲಿ ಒಂದಾದ ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 150 ಜನರಿಗೆ ಗಾಯಗಳಾಗಿವೆ. ಅವರಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ. ಕಾಸರಗೋಡಿನ ನೀಲೇಶ್ವರಂನ ಅಂಜೂಟಂಪಲಮ್ ವೀರರ್ಕಾವ್ ನಲ್ಲಿ ನಡೆದಿದೆ.
ಸೋಮವಾರ ಮೂವಳಂಕುಳಿ ಚಾಮುಂಡಿ ತೆಯ್ಯಂ ಆಚರಣೆಯ ವೇಳೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈ ಅಗ್ನಿ ದುರಂತ ಸಂಭವಿಸಿದ್ದು, ಬೆಂಕಿಯ ಕಿಡಿ ಅಲ್ಲೇ ಪಕ್ಕದಲ್ಲಿದ್ದ ಪಟಾಕಿ ಸಂಗ್ರಹಕ್ಕೆ ತಾಗಿ ದೊಡ್ಡ ಪ್ರಮಾಣದಲ್ಲಿ ಸ್ಫೋಟಗೊಂಡಿದೆ.
ಈ ಅವಘದಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಪಟಾಕಿ ಸಂಗ್ರಹ ಪ್ರದೇಶದ ಬಳಿಯಿದ್ದ 8 ಜನರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳಲ್ಲಿ ಕೆಲವರನ್ನು ಜಿಲ್ಲಾಸ್ಪತ್ರೆಗೆ ಹಾಗೂ ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ