ಪ್ರಗತಿವಾಹಿನಿ ಸುದ್ದಿ: ಪತಿ-ಪತ್ನಿ ನಡುವಿನ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗದ ವಿನೋಭಾನಗರದಲ್ಲಿ ನಡೆದಿದೆ.
ಪತಿ-ಪತ್ನಿ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮನನೊಂದ ಮಹಿಳೆ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮಲಾ (35) ಆತ್ಮಹತ್ಯೆಗೆ ಶರಣಾದ ಮಹಿಳೆ.
ಮೃತ ಕಮಲಾ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಗುತ್ತಿಗೆ ನೌಕರಳಾಗಿ ಕೆಲಸ ಮಾಡುತ್ತಿದ್ದರು. ಸೋಮವಾರ ರಾತ್ರಿ ಪತಿ-ಪತ್ನಿ ನಡುವೆ ಜಗಳವಾಗಿದೆ. ಇದರಿಂದ ಮನನೊಂದ ಕಮಲಾ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿನೋಭಾನಗರದ ಬಳಿ ತಾಳಗುಪ್ಪ-ಮೈಸೂರು ರೈಲಿಗೆ ತಲೆಕೊಟ್ಟು ಆವಿಗೆ ಶರಣಾಗಿದ್ದು, ಮಹಿಳೆಯ ದೇಹ ಛಿದ್ರಛಿದ್ರಗೊಂಡಿದೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ