ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮುಡಾ ಹಗರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ವಶಕ್ಕೆ ಪಡೆಯಲಾಗಿದೆ.
ಅ.28ರಂದು ಇಡಿ ಅಧಿಕಾರಿಗಳು ನಟೇಶ್ ಅವರ ಬೆಂಗಳೂರಿನ ಮಲ್ಲೇಶ್ವರಂ ನಿವಾಸದ ಮೇಲೆ ದಾಳಿ ನಡೆಸಿದ್ದರು. ಇಂದು ನಟೇಶ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮಲ್ಲೇಶ್ವರಂನ ನಿವಾಸದಿಂದ ನಟೇಶ್ ಅವರಿಗೆ ಸೇರಿದ ಕೆಂಪು ಬಣ್ಣದ ಕಿಯಾ ಕಾರಿನಲ್ಲಿಯೇ ಅವರನ್ನು ಶಾಂತಿನಗರದ ಇಡಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ಮತ್ತೊಂದೆಡೆ ಇಡಿ ದಾಳಿ ಬೆನ್ನಲ್ಲೇ ಮುಡಾ ಮತ್ತೋರ್ವ ಮಾಜಿ ಆಯುಕ್ತ ದಿನೇಶ್ ನಾಪತ್ತೆಯಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಅವರ ನಿವಾಸಕ್ಕೆ ಇಡಿ ಅಧಿಕರಿಗಳು ನೋಟಿಸ್ ಅಂಟಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ