ಪ್ರಗತಿವಾಹಿನಿ ಸುದ್ದಿ: 5 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ಶೇಖರಿಸಿಟ್ಟಿದ್ದ ಆರೋಪಿಯನ್ನು ಬೆಂಗಳೂರನ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.
ಕತ್ರಿಗುಪ್ಪೆಯ ಪುರುಷೋತ್ತಮ್ ಬಂಧಿತ ಆರೋಪಿ, ಪುರುಷೋತ್ತಮ್ ಗೋವಾದಲ್ಲಿನ ಮದ್ಯದ ಅಂಗಡಿಯವರ ಜತೆ ಸಂಪರ್ಕ ಹೊಂದಿದ್ದು, ಕಡಿಮೆ ಬೆಲೆ ಮದ್ಯವನ್ನು ಗೋವಾದಿಂದ ಬಸ್ ಮೂಲಕ ತರಿಸಿಕೊಳ್ಳಲುತ್ತಿದ್ದ ಬಸ್ ಬೆಂಗಳೂರಿಗೆ ಬರುತ್ತಿದ್ದಂತೆ ಅದನ್ನು ಇಳಿಸಿಕೊಂಡು ಮನೆಯಲ್ಲಿ ಸಂಗ್ರಹಿಸಿಟ್ಟು ಕೊಂಡಿದ್ದ.
ಕಳೆದ ಅ.27 ರಂದು ಬನಶಂಕರಿಯ 2 ನೇ ಹಂತದಲ್ಲಿ ಬೈಕ್ ನಿಲ್ಲಿಸಿಕೊಂಡು ಯಾವುದೋ ಕೆಲಸದಲ್ಲಿ ತೊಡಗಿದ್ದ ಇದರಿಂದ ಅನುಮಾನಗೊಂಡ ಅಬಕಾರಿ ಸಿಬ್ಬಂದಿ ಆತನ ಬಳಿಯಿದ್ದ ಬ್ಯಾಗ್ ಅನ್ನು ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಗೋವಾದಲ್ಲಿ ಮಾರಾಟ ಮಾಡಲು ಅನುಮತಿ ಇರುವ ಬಾಟಲ್ ಗಳು ಪತ್ತೆಯಾಗಿದೆ. ಕೂಡಲೇ ಆರೋಪಿಯ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಗೋವಾ ಮದ್ಯದ ಅಂಗಡಿಯೊಂದಿಗೆ ಸಂಬಂಧವಿರುವುದು ಬೆಳಕಿಗೆ ಬಂದಿದೆ.
ಬಳಿಕ ಆರೋಪಿ ಪುರುಷೋತ್ತಮ್ ನನ್ನು ಮನೆಗೆ ಕರೆದೊಯ್ದು ಪರಿಶೀಲನೆ ನಡೆಸಿದಾಗ ಸುಮಾರು 5 ಲಕ್ಷ ರೂ. ಮೌಲ್ಯದ ಮದ್ಯದ ಬಾಟಲಿ ಇರುವುದು ಪತ್ತೆಯಾಗಿದೆ. ಸದ್ಯ ಆರೋಪಿ ವಿರುದ್ಧ ಅಬಕಾರಿ ಕಾಯ್ದೆ 1965ರ ಕಲಂ 11, 14, 15, 38(ಎ) ಹಾಗೂ 43(ಎ) ಅಡಿ ಕೇಸ್ ದಾಖಲಿಸಲಾಗಿದ್ದು, 144 ಬಾಟಲ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ