ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ, ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಪತಿಗೆ ಜಾಮೀನು ಮಂಜೂರಾಗುತ್ತಿದ್ದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಂತಸ ವ್ಯಕ್ತಪಡಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮೀ ಸತತವಾಗಿ ಕಾನೂನು ಹೋರಾಟ ನಡೆಸಿದ್ದರು. ಹಲವು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ದರ್ಶನ್ ಗೆ ಚಿಕಿತ್ಸೆಗಾಗಿ ಹೈಕೋರ್ಟ್ 6 ವಾರಗಳ ಮಧ್ಯಂತ ಜಾಮೀನು ಮಂಜೂರು ಮಾಡಿದೆ.
ದರ್ಶನ್ ಗೆ ಜಾಮೀನು ಮಂಜೂರಾಗುತ್ತಿದ್ದಂತೆ ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿರುವ ಪತ್ನಿ ವಿಜಯಲಕ್ಷ್ಮೀ, ಕಾಮಾಕ್ಯ ದೇವಸ್ಥಾನದ ಫೋಟೋ ಹಾಕಿ ಕೃತಜ್ಞತೆ ಸಲ್ಲಿಸಿದ್ದಾರೆ. ದೇವಿ ಆಶಿರ್ವಾದದಿಂದ ಬೇಲ್ ಸಿಕ್ಕಿದೆ ಎಂದು ದೇವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ