ಪ್ರಗತಿವಾಹಿನಿ ಸುದ್ದಿ; ನ.1ರಂದು ನಡೆಯಲಿರುವ 69ನೇ ಕನ್ನಡ ರಾಜ್ಯೋತ್ಸವ ಶುಭ ಸಂದರ್ಭ ಹಿನ್ನೆಲೆ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಈ ಕುರಿತು ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1,575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಗಿದೆ. ಪ್ರತಿ ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಎಂದರು.
ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69 + 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವಿವರಿಸಿದರು.
ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ, ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ.
ವಿವಿರಕ್ಕಾಗಿ ಕ್ಲಿಕ್ ಮಾಡಿ –
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ