Film & Entertainment

*ನಟ ದರ್ಶನ್ ಜೈಲಿನಿಂದ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಕೊಲೆ ಆರೋಪಿ ನಟ ದರ್ಶನ್ ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದು, ಬೆಂಗಳೂರಿನತ್ತ ಪ್ರಯಾಣಿಸಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಗೆ ಹೈಕೋರ್ಟ್ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಇಂದು ಸಂಜೆ 6 ಗಂಟೆಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Home add -Advt

ದರ್ಶನ್ ಜೈಲಿನಿಂದ ಹೊರ ಬರುತ್ತಿದ್ದಂತೆ ಬಳ್ಳಾರಿ ಜೈಲಿನ ಬಳಿ ನೆರೆದಿದ್ದ ಅಭಿಮಾನಿಗಳ ಹರ್ಷೋದ್ಘಾರ ಮುಗಿಲುಮುಟ್ಟಿದೆ. ಜೈಲಿನಿಂದ ಬಿಡುಗಡೆ ಬಳಿಕ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಜೊತೆ ಕಾರಿನಲ್ಲಿ ಬೆಂಗಳೂರಿನತ್ತ ಹೊರಟಿದ್ದಾರೆ.

ಬಳ್ಳಾರಿಯಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸಿದ್ದು, ಮಧ್ಯರತರಿ ವೇಳೆಗೆ ಬೆಂಗಳೂರು ತಲುಪಲಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ದರ್ಶನ್ ಬರುವ ಮಾರ್ಗದಲ್ಲಿ ಹಾಗೂ ಕಾರಿಗೆ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.

Related Articles

Back to top button