Kannada NewsKarnataka NewsPolitics

*ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ: ಪತಿ, ಅತ್ತೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ : ಮೈಸೂರಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿಯಾಗಿದ್ದಾಳೆ ಎಂಬ ಆರೋಪ ಕೇಳಿ ಬಂದದ್ದು, ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೂಡ್ಲುರು ಗ್ರಾಮದಲ್ಲಿ ಈ ಘಟನೆ ನಡೆದಿದೆ. 

ನಿತ್ಯ ನಿರ್ಮಲ (25) ಮೃತ ಗೃಹಿಣಿ ಎಂದು ಗುರುತಿಸಲಾಗಿದ್ದು, ನಿತ್ಯ ನಿರ್ಮಲ ಅವರ ಪತಿ ಕಿರಣ್ ಹಾಗೂ, ಅತ್ತೆ ವಿರುದ್ಧ ದೂರು ದಾಖಲಾಗಿದೆ. ಕಳೆದ ಎರಡು ವರ್ಷದ ಹಿಂದೆ ಕಿರಣ್ ರನ್ನ ನಿರ್ಮಲ ಮದುವೆಯಾಗಿದ್ದರು. ಆಗಾಗ ವರದಕ್ಷಿಣೆ ತರುವಂತೆ ನಿರ್ಮಲಾರಿಗೆ ಪತಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದ್ದು, ನಿನ್ನೆ ಬುಧವಾರ ನಿರ್ಮಲ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಬಳಿಕ ನಿರ್ಮಲ ಪೋಷಕರಿಗೂ ಮಾಹಿತಿ ತಿಳಿಸದೇ ಅಂತ್ಯಕ್ರಿಯೆಗೆ ಕಿರಣ್ ಕುಟುಂಬಸ್ಥರು ಮುಂದಾಗಿದ್ದಾರೆ.

Home add -Advt

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ನಿರ್ಮಲ ಕುಟುಂಬಸ್ಥರು ಕಿರಣ್ ಕುಟುಂಬದ ಮೇಲೆ ಹರಿಹಾಯ್ದಿದ್ದಾರೆ. ಎರಡು ಕುಟುಂಬದ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ನಿರ್ಮಲರನ್ನ ಕೊಲೆ ಮಾಡಿರುವ ಶಂಕೆ ಹಿನ್ನೆಲೆಯಲ್ಲಿ ಕಿರಣ್ ಹಾಗೂ ಆತನ ತಾಯಿಯನ್ನ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

Related Articles

Back to top button