Film & Entertainment

*ಆಸ್ಪತ್ರೆಗೆ ದಾಖಲಾದ ನಟ ದರ್ಶನ್*

ಪ್ರಗತಿವಾಹಿನಿ ಸುದ್ದಿ: 6 ವಾರಗಳ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕೊಲೆ ಆರೋಪಿ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ಎ2 ಆರೋಪಿ ನಟ ದರ್ಶನ್ ಗೆ ತೀವ್ರ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅ.30ರ ಸಂಜೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು. ಇಂದು ಚಿಕಿತ್ಸೆಗಾಗಿ ಬೆಂಗಳೂರಿನ ಕೆಂಗೇರಿ ಬಳಿಯ ವಿಷ್ಣುವರ್ಧನ್ ರಸ್ತೆಯಲ್ಲಿರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪತ್ನಿ ವಿಜಯಲಕ್ಷ್ಮೀ ಜೊತೆ ಆಸ್ಪತ್ರೆಗೆ ಆಗಮಿಸಿದ ದರ್ಶನ್, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಬಿಜಿಎಸ್ ತಜ್ಞವೈದ್ಯರಿಂದ ದರ್ಶನ್ ಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button