*ಪ್ರಧಾನಿ ಮೋದಿ ಗ್ಯಾರಂಟಿ ಟ್ವೀಟ್ ವಿರುದ್ಧ ಮುಗಿಬಿದ್ದ ಕಾಂಗ್ರೆಸ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು/ ನವದೆಹಲಿ : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮುಗಿ ಬಿದ್ದಿದೆ.
ಎಐಸಿಸಿ ಪ್ರಧಾನಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಟ್ವೀಟ್ ಮಾಡಿ ಮೋದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
*ರಾಜಕೀಯ ಪುಡಾರಿಯ ರೀತಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸುಳ್ಳು ಆರೋಪ: ಸಿದ್ದರಾಮಯ್ಯ*
*ಎಲ್ಲವನ್ನೂ ಪಕ್ಷ, ರಾಜಕೀಯದ ಹಳದಿ ಕನ್ನಡಕದಿಂದ ನೋಡುವ ಅಭ್ಯಾಸವನ್ನು ಬಿಟ್ಟು ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿ ಕರ್ನಾಟಕದ ಅಭಿವೃದ್ದಿ ಮಾದರಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.*
*ಕಳೆದ ಎರಡು ಲೋಕಸಭಾ ಚುನಾವಣೆಗೆ ನೀಡಿದ್ದ ಪ್ರಣಾಳಿಕೆಯ ಜೊತೆ ಬಹಿರಂಗ ಚರ್ಚೆಗೆ ಬನ್ನಿ ಎಂದೂ ಮೋದಿಗೆ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ*
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೊತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ.
ಪ್ರಧಾನಿ ನರೇಂದ್ರ ಮೋದಿ ಅವರೇ, ಇಂದು ಕನ್ನಡ ರಾಜ್ಯೋತ್ಸವದ ದಿನ. ““ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ…”” ಎಂದು ಸಾರಿದ ರಾಷ್ಟ್ರಕವಿ ಕುವೆಂಪು ಅವರ ಕಾವ್ಯವನ್ನು ನಾಡಗೀತೆಯಾಗಿ ಸ್ವೀಕರಿಸಿರುವ ಕರ್ನಾಟಕ, ಭಾರತಕ್ಕೆ ತಾಯಿಯ ಸ್ಥಾನವನ್ನು ನೀಡಿದೆ. ಇದೇ ಪ್ರೀತಿ ಮತ್ತು ಬದ್ಧತೆಯಿಂದ ಪ್ರಾಮಾಣಿಕವಾಗಿ ತಮ್ಮ ಬೆವರಗಳಿಕೆಯನ್ನು ತೆರಿಗೆಯಾಗಿ ನೀಡಿ ದೇಶದ ಬೊಕ್ಕಸವನ್ನು ತುಂಬಿದವರು ಕನ್ನಡಿಗರು. ದೇಶದಲ್ಲಿ ಮಹಾರಾಷ್ಟ್ರದ ನಂತರ ಅತ್ಯಂತ ಹೆಚ್ಚು ನೇರ ತೆರಿಗೆ (11.9%) ಪಾವತಿಯಾಗಿರುವುದು ಕರ್ನಾಟಕ ರಾಜ್ಯದಲ್ಲಿ ಎನ್ನುವುದನ್ನು ಭಾರತೀಯ ಸ್ಟೇಟ್ ಬ್ಯಾಂಕ್ ವರದಿ ಒಪ್ಪಿಕೊಂಡಿರುವುದನ್ನು ನೀವು ಗಮನಿಸಿರಬಹುದೆಂದು ಭಾವಿಸಿದ್ದೇನೆ.
ಎಲ್ಲವನ್ನೂ ಪಕ್ಷ, ರಾಜಕೀಯದ ಹಳದಿ ಕನ್ನಡಕದಿಂದ ನೋಡುವ ಅಭ್ಯಾಸವನ್ನು ಬಿಟ್ಟು ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿ ಕರ್ನಾಟಕದ ಅಭಿವೃದ್ದಿ ಮಾದರಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬಡವರ ಕೈಗೆ ದುಡ್ಡು ಸಿಕ್ಕಿ ಅದು ಮಾರುಕಟ್ಟೆಗೆ ಹರಿದುಬಂದು ಅದರಿಂದ ತೆರಿಗೆ ಸಂಗ್ರಹವೂ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಬಲ ಬರಲಿದೆ ಎಂದು ಪ್ರಾರಂಭದಿಂದಲೂ ನಾನು ಹೇಳಿಕೊಂಡು ಬಂದಿದ್ದೇನೆ. ಅದು ಇಂದು ನಿಜವಾಗಿದೆ. ಇದಕ್ಕಾಗಿ ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿತ್ತು, ಆದರೆ ನೀವು ಸುಳ್ಳಿನ ಬಾಣಗಳ ಮೂಲಕ ಕನ್ನಡಿಗರನ್ನು ಅವಮಾನಿಸುತ್ತಿದ್ದೀರಿ. ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ.
ಸನ್ಮಾನ್ಯ ಮೋದಿ ಅವರೇ, ನಮ್ಮ ಸರ್ಕಾರದ ಕಡೆಗೆ ಬೆರಳು ಮಾಡುವ ಮುನ್ನ ಕರ್ನಾಟಕದ ಬಿಜೆಪಿ ಪಕ್ಷದ ವಿನಾಶಕಾರಿ ಇತಿಹಾಸದ ಮೇಲೊಮ್ಮೆ ಕಣ್ಣಾಯಿಸಿ. ನಾವು ಜನರಿಗೆ ನೀಡಿದ್ದ ಪ್ರತಿ ಭರವಸೆಯನ್ನು ಈಡೇರಿಸಿದ್ದೇವೆ – ನಮ್ಮ 5 ಗ್ಯಾರಂಟಿ ಯೋಜನೆಗಳನ್ನು ₹52,000 ಕೋಟಿಗೂ ಅಧಿಕ ಅನುದಾನದಲ್ಲಿ ಅನುಷ್ಠಾನಕ್ಕೆ ಕೊಟ್ಟಿದ್ದೇವೆ, ಇದರ ಜೊತೆಗೆ ನಾಡಿನ ಭವಿಷ್ಯ ರೂಪಿಸಲು ₹52,903 ಕೋಟಿ ಅನುದಾನ ಬಳಸಲಾಗುತ್ತಿದೆ.
ರಾಜ್ಯದಲ್ಲಿ ಅಧಿಕಾರದಲ್ಲಿದ್ದ ನಿಮ್ಮ ಪಕ್ಷದ ಸಾಧನೆ ಏನು? ಏಳು ಕೋಟಿ ಕನ್ನಡಿಗರ ಅಭಿವೃದ್ದಿಗಾಗಿ ವ್ಯಯವಾಗಬೇಕಾಗಿದ್ದ ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು 40% ಕಮಿಷನ್ ರೂಪದಲ್ಲಿ ತಿಂದು ತೇಗಿದ್ದೇ? ಆದಾಯದ ಮೂಲಗಳನ್ನೆಲ್ಲ ಬರಿದು ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯ ಅಂಚಿಗೆ ತಳ‍್ಳಿದ್ದೇ? ಈ ರೀತಿ ಲೂಟಿ ಮಾಡಿದ್ದ ಹಣದಲ್ಲಿ ನಿಮಗೂ ಪಾಲು ಸಂದಾಯವಾಗಿದೆ ಎಂದು ನಿಮ್ಮ ಪಕ್ಷದ ನಾಯಕರೇ ಮಾಡಿರುವ ಆರೋಪ ನಿಮ್ಮ ಗಮನಕ್ಕೂ ಬಂದಿರಬಹುದಲ್ಲವೇ?ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ನಾಯಕರು ಲೂಟಿ ಮಾಡುತ್ತಿದ್ದ 40% ಕಮಿಷನ್ ಹಣವನ್ನು ನಾವು ನೇರವಾಗಿ ಜನರಿಗೆ ತಲುಪಿಸುತ್ತಿದ್ದೇವೆ.
ನಾವು ನುಡಿದಂತೆ ನಡೆದಿದ್ದೇವೆ, ನಿಮ್ಮ ಭರವಸೆಗಳೇನಾಯಿತು? ಪ್ರತಿಯೊಬ್ಬನ ಖಾತೆಗೆ ಹದಿನೈದು ಲಕ್ಷ ರೂಪಾಯಿ ಜಮೆ ಆಯಿತೇ? ಕಪ್ಪು ಹಣ ಮಾಯವಾಯಿತೇ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಯಾಯಿತೇ? ರೈತರ ಆದಾಯ ದುಪ್ಪಟ್ಟಾಯಿತೇ? ಎಲ್ಲಿದೆ ನಿಮ್ಮ ಸ್ಮಾರ್ಟ್ ಸಿಟಿ? ಎಲ್ಲಿದೆ ನಿಮ್ಮ ಮೇಕ್ ಇನ್ ಇಂಡಿಯಾ? ನಿಮ್ಮ ಸಾಧನೆಗಳಾದರೂ ಏನು? ನಾಡನ್ನು ಸಾಲದ ಕೂಪಕ್ಕೆ ತಳ್ಳಿದ್ದೆ? ಸುಳ್ಳು ಮತ್ತು ಅಪಪ್ರಚಾರದ ಮೂಲಕ ನಿಮ್ಮ ವೈಫಲ್ಯಗಳನ್ನು ಮುಚ್ಚಿಹಾಕಿದ್ದೇ?
ನಿಮ್ಮ ಅತ್ಯಂತ ಪ್ರಮುಖ ಸಾಧನೆ ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಿದ್ದು. ನಿಮ್ಮ ಆಡಳಿತದಲ್ಲಿ 2024-25ರ ಆರ್ಥಿಕ ವರ್ಷದ ಅಂತ್ಯಕ್ಕೆ ದೇಶದ ಸಾಲ ₹185.27 ಲಕ್ಷ ಕೋಟಿಯ ಗಡಿ ಮುಟ್ಟಲಿದೆ ಎಂದು ಅಂದಾಜಿಸಲಾಗಿದೆ. ಇದು ಜಿಡಿಪಿ 56.8% ಆಗಲಿದೆ. ಇದು ನಿಮ್ಮ ದುರಾಡಳಿತ ಮಾತ್ರವಲ್ಲ, ನೀವು ಪ್ರತಿಯೊಬ್ಬ ಭಾರತೀಯನ ಮೇಲೆ ಹೊರಿಸುತ್ತಿರುವ ಸಾಲದ ಹೊರೆಯೂ ಹೌದು.
ಪ್ರಧಾನಿ ನರೇಂದ್ರ ಮೋದಿ ಅವರೇ, ಆಗಾಗ ನೀವು ಸುಳ್ಳು ಸಂಗತಿಗಳನ್ನು ಪೋಣಿಸಿಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಬಂದಿದ್ದೀರಿ. ಈ “ ತೂ ತೂ ಮೈ ಮೈ..” ಚರ್ಚೆಗೆ ತಾರ್ಕಿಕವಾದ ಅಂತ್ಯ ಹಾಡಿ ಬಿಡೋಣ.
ಕಳೆದ ಎರಡು ಲೋಕಸಭಾ ಚುನಾವಣೆಯ ಮುನ್ನ ನಿಮ್ಮ ಪಕ್ಷ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದು ಸಾರ್ವಜನಿಕ ಚರ್ಚೆಯನ್ನು ಹಮ್ಮಿಕೊಳ್ಳೋಣ. ಪ್ರಣಾಳಿಕೆಯಲ್ಲಿ ನೀವು ಕೊಟ್ಟಿರುವ ಭರವಸೆಗಳಲ್ಲಿ ಎಷ್ಟನ್ನು ನೀವು ಈಡೇರಿಸಿದ್ದೀರಿ? ಎನ್ನುವುದನ್ನು ಸಾರ್ವಜನಿಕವಾಗಿಯೇ ಚರ್ಚೆ ಮಾಡೋಣ. ದೇಶದ ಪ್ರಜ್ಞಾವಂತ ಜನರೇ ಯಾರದ್ದು ಎಷ್ಟು ಸತ್ಯ? ಎಷ್ಟು ಸುಳ್ಳು? ಎನ್ನುವುದನ್ನು ತೀರ್ಮಾನಿಸಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
*ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ; ಮೋದಿ ಅವರನ್ನು ಅವರದೇ ಕಚೇರಿ ದಾರಿತಪ್ಪಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*
*ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಸೋಲಿನ ಭಯಕ್ಕೆ ಮೋದಿ ಅವರಿಂದ ಅನವಶ್ಯಕ ವಾಗ್ದಾಳಿ*
“ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆಯುತ್ತದೆ ಎಂದು ಮೋದಿ ಅವರನ್ನು ಪ್ರಧಾನಮಂತ್ರಿ ಕಚೇರಿ ದಾರಿ ತಪ್ಪಿಸಿದೆ. ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಶುಕ್ರವಾರ ಪ್ರತಿಕ್ರಿಯೆ ನೀಡಿದರು.
ಗ್ಯಾರಂಟಿ ಯೋಜನೆಗಳ ವಿರುದ್ಧ ಪ್ರಧಾನಿ ಮೋದಿ ಅವರ ಎಕ್ಸ್ (ಟ್ವೀಟ್) ಬಗ್ಗೆ ಕೇಳಿದ ಪ್ರಶ್ನೆಗೆ, “ಕಾಂಗ್ರೆಸ್ ಕಳೆದ 60 ವರ್ಷಗಳಲ್ಲಿ ನೀಡಿದ ಯಾವುದೇ ಯೋಜನೆಗಳನ್ನು ಹಿಂದಕ್ಕೆ ಪಡೆದ ಇತಿಹಾಸವಿಲ್ಲ. ಉಳುವವನಿಗೆ ಭೂಮಿ, ಪಿಂಚಣಿ ಯೋಜನೆ, ನರೇಗಾ ಸೇರಿದಂತೆ ಅನೇಕ ಯೋಜನೆಗಳು ಈಗಲೂ ಚಾಲ್ತಿಯಲ್ಲಿವೆ” ಎಂದರು.
“ಬಿಜೆಪಿಯಿಂದ ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಕೆಟ್ಟ ರಾಜಕೀಯ ಗಿಮಿಕ್ ನಡೆಯುತ್ತಿದೆ. ದೇಶದ ಉನ್ನತ ಕಚೇರಿಯು ಇಂತಹ ಸುಳ್ಳು ಹರಡಬಾರದು. ಬಿಜೆಪಿಯು ಅನೇಕ ರಾಜ್ಯಗಳಲ್ಲಿ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿದೆ” ಎಂದು ತಿರುಗೇಟು ನೀಡಿದರು.
ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಗುರಿಯಾಗಿಟ್ಟುಕೊಂಡು ಈ ಹೇಳಿಕೆ ನೀಡಲಾಗಿದೆಯೇ ಎಂದು ಕೇಳಿದಾಗ “ಕಾಂಗ್ರೆಸ್ ಪಕ್ಷವು ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂಬುದು ಪ್ರಧಾನಿಯವರಿಗೆ ಅರಿವಾಗಿದೆ. ಆದ ಕಾರಣಕ್ಕೆ ಅನವಶ್ಯಕ ವಾಗ್ದಾಳಿ ನಡೆಸುತ್ತಿದ್ದಾರೆ” ಎಂದರು.
*Shri K C Venugopal* reaction to Shri NARENDRA MODI, PRIME MINISTER of INDIA
The uncrowned champion of puffery, misdirection and unfulfilled promises has the audacity to question Congress’ unparalleled track record of delivering welfare.
Where are the Ache Din, Mr. Modi? Where is the Amrit Kaal? What happened to delivering housing for all by 2022, 100 smart cities, or the many lies you told the people about the benefits of demonetisation?
Our government in Karnataka, on the other hand, is routinely delivering Rs. 2000 to 1.2 crore women. We are ensuring food security through the Anna Bhagya Scheme which the Centre opposed.
Our Telangana Government has taken the burden of debt and misery away from lakhs of farmers. Three crore women of Karnataka have experienced newfound freedom due to the free bus travel guaranteed by the Shakti scheme.
Unlike the BJP’s election gimmicks, ours is a welfare model that has stood the test of time since independence.
Insincere, vengeful and non-performing leaders have no right to create doubt over our governance.
Dear Prime Minister,
Responsibility of office one holds is paramount in Public life. This is a respectful reminder to that solemn obligation.
While the desire to constantly counter and attack Congress President, @kharge ji and Sh. @RahulGandhi ji is understandable, one can not lose sight of incontrovertible facts.
Infact, PM must appreciate the astounding & path breaking “Public Welfare Guarantees” that Congress Govt of Karnataka has implemented.
The “Karnataka Model of Congress Guarantees” has become a case study of accountable governance with empathy, compassion & inclusiveness. I hope BJP will implement 50% of these in any BJP ruled State.
TO PUT THE RECORD STRAIGHT
1. GRIH LAKSHMI – Karnataka Congress Govt transfers ₹25,407 CRORES (Twenty Five Thousand Four Hundred & Seven Crores) annually in Bank Accounts of 1,21,00,000 (1.21 Crore) Kannadiga Mothers & Sisters.
2. ANNA BHAGYA – Karnataka Congress Govt transfers ₹8,433 CRORES (Eight Thousand Four Hundred & Thirty Three Crores) annually in Bank Accounts of 4,08,00,000 ( 4.08 Crore) Kannadiga Brothers & Sisters as cash transfer against 10 KG of Free Rice every month, as GOI refused the FCI to sell rice to Karnataka Govt.
3. GRUHA JYOTHI – Karnataka Congress Govt transfers ₹ 9,455 CRORES (Nine Thousand Four Hundred & Fifty Five Crores) annually for 200 Units of Free Electricity to 1,60,00,000 (1.60 Crore) households.
4. SHAKTI FREE BUS TRAVEL – 303 Crore plus “Free Bus Trips” by Kannadiga Women have taken place since formation of Congress Govt in May 2023 till date at a cost of ₹ 7,310 CRORE (Seven Thousand Three Hundred & Ten Crores).
5. YUVANIDHI – 1,82,000 Kannadiga Graduate & Diploma Holders Youth get ₹3,000/₹1,500 per month for a period of two years post passing of graduation/diploma.
This is how the Congress Govt of Karnataka transfers over ₹ 52,000 CRORE annually in the Bank Accounts of fellow Kannadigas as part of our Congress Guarantees.
Has a single BJP Govt in any State accomplished this? This is truly People’s welfare. In addition thereto, Karnataka Govt spends ₹52,903 Crore in Capital outlay for State’s development.
This is what has been achieved under the leadership of our CM, Sh. @siddaramaiah & Dy. CM, Shri @DKShivakumar.
This is truly service of the people,
This is truly welfare of the people,
This is truly how Govts should function,
THIS IS THE CONGRESS !
Narendra Modi (@narendramodi) posted at 5:48 pm on Fri, Nov 01, 2024:
The Congress Party is realising the hard way that making unreal promises is easy but implementing them properly is tough or impossible. Campaign after campaign they promise things to the people, which they also know they will never be able to deliver. Now, they stand badly
(https://x.com/narendramodi/status/1852324286608134625?t=fOtkcYX2TliB3EPvyr60yQ&s=03)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ