Karnataka News

*ಸಿಲಿಂಡರ್ ಲಾರಿ- ಬಸ್ ಭೀಕರ ಅಪಘಾತ: 10 ಪ್ರಯಾಣಿಕರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬಸ್ ನಲ್ಲಿದ್ದ 10 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿ ಬಳಿ ನಡೆದಿದೆ.

ಇದೇ ವೇಳೆ ಅದೇ ಮಾರ್ಗವಾಗಿ ಸಾಗುತ್ತಿದ್ದ ಸಚಿವ ಎಂ.ಸಿ.ಸುಧಾಕರ್, ತಕ್ಷಣ ಆಂಬುಲೆನ್ಸ್ ಗಳನ್ನು ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಅಪಘಾತದ ರಭಸಕ್ಕೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿಲ್ಲ.ಹಾಗಾಗಿ ಭಾರಿ ಅನಾಹುತ ತಪ್ಪಿದೆ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ. ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button