Belagavi NewsBelgaum NewsKannada News

*ಒಂದು ವರ್ಷ ಕಾಲ ಶತಮಾನೋತ್ಸವ ಆಚರಣೆ: ಎಚ್ ಕೆ ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಕಾಂಗ್ರೆಸ್ ಅಧವೇಶನಕ್ಕೆ 100 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 2 ರಿಂದ ಒಂದು ವರ್ಷಗಳ ಕಾಲ ಶತಮಾನೋತ್ಸವ ವರ್ಷಾಚರಣೆ ಮಾಡಲಾಗುತ್ತೆ. ಅಂತರಾಷ್ಟ್ರೀಯ ಮಹತ್ವ ಪಡೆಯಲು ವಿಧಾನಮಂಡಳ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಸಲು ಉದ್ಧೇಶಿಸಲಾಗಿದೆ ಎಂದು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. 

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನ ಆಚರಣೆ ಮೂಲಕ ಗಾಂಧೀಜಿಯವರ ತತ್ವ ಸಿದ್ಧಾಂತಗಳನ್ನು ಇನ್ನಷ್ಟು ಪ್ರಚುರಪಡಿಸಲು ಹಾಗೂ ಮನೆ ಮನೆಗೆ ಗಾಂಧೀಜಿ ಸಿದ್ಧಾಂತಗಳನ್ನು ತಲುಪಿಸುವ ಉದ್ದೇಶ “ಗಾಂಧಿ ಭಾರತ” ಕಾರ್ಯಕ್ರಮದ್ದಾಗಿದೆ. ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮ ಆಯೋಜಿಸಲು ಗಾಂಧೀವಾದಿಗಳು, ಹಿರಿಯರ ಜತೆ ಚರ್ಚಿಸಿ ಅಧಿವೇಶನದ ಇತಿಹಾಸ ಮರುಸೃಷ್ಟಿ ಮತ್ತು ಮೆಲುಕು ಹಾಕಲು ಶತಮಾನೋತ್ಸವ ಆಚರಣೆ ಮಾಡಲಾಗುವುದು. ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಿ, ವಿಸ್ತೃತವಾಗಿ ಚರ್ಚಿಸಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದರು.

ಗಾಂಧೀಜಿಯ ಕುರಿತು ವಿಶೇಷ ಅಭಿಮಾನ ಹೊಂದಿರುವ ಒಬಾಮಾ ಅವರು ಜಂಟಿ ಅಧಿವೇಶನ ಉದ್ಧೇಶಿಸಿ ಮಾತನಾಡಬೇಕು ಎಂಬುದು ಎಲ್ಲರ ಆಶಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಿ ಪತ್ರವನ್ನು ಬರೆದಿರುತ್ತಾರೆ. ಡಿಸೆಂಬರ್ 26 – 27 ಅಥವಾ ಜನವರಿ-2025 ರಿಂದ ಅಕ್ಟೋಬರ್-2025 ರ ಒಳಗಾಗಿ ದಿನಾಂಕ‌ ನೀಡಲು ಕೋರಲಾಗಿದೆ. ಜಂಟಿ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸಲಾಗುವುದು. ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಗೆ ಸರಕಾರ 25 ಕೋಟಿ ರೂಪಾಯಿ ನೀಡಲಿದ್ದು, ಅಗತ್ಯಬಿದ್ದರೆ ಹೆಚ್ಚುವರಿ ಕೂಡ ನೀಡಲಿದೆ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button