Politics

*ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೊಂದು ಕರಾಳ ಅಧ್ಯಾಯ ಬಹಿರಂಗ: ಅಬಕಾರಿ ಇಲಾಖೆಯಲ್ಲಿ 500 ಕೋಟಿ ಲೂಟಿ: ಆರ್.ಅಶೋಕ್ ಆರೋಪ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ, ಮುಡಾ ಹಗರಣದ ಬೆನ್ನಲ್ಲೇ ಇದೀಗ ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಅಬಕಾರಿ ಸಚಿವರ ವಿರುದ್ಧವೇ ಮದ್ಯದಂಗಡಿ ಮಾಲೀಕರು ತಿರುಗಿ ಬಿದ್ದಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ 500 ಕೋಟಿ ಲೂಟಿಯಾಗಿದೆ. ಇದು ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೊಂದು ಕರಾಳ ಅಧ್ಯಾಯ. ರಾಜ್ಯ ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಸಚಿವರು ‘ಮಂಥ್ಲಿ ಮನಿ’ ಹೆಸರಿನಲ್ಲಿ ಮದ್ಯದ ಅಂಗಡಿಗಳಿಂದ ಪ್ರತಿ ತಿಂಗಳಿಗೆ 15 ಕೋಟಿ ರೂಪಾಯಿಯಂತೆ ವರ್ಷಕ್ಕೆ 180 ಕೋಟಿ ರೂ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಅಬಕಾರಿ ಸಚಿವರನ್ನು ಬದಲಾಯಿಸಲು ಒತ್ತಾಯಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದಾರೆ.

Home add -Advt

ವರ್ಗಾವಣೆ ದಂಧೆ, ಲೈಸೆನ್ಸ್ ಮಂಜೂರಾತಿ, ಮದ್ಯದ ಅಂಗಡಿಗಳಿಂದ ‘ಮಂಥ್ಲಿ ಮನಿ’ ಸೇರಿದಂತೆ ಅಬಕಾರಿ ಸಚಿವರು ವರ್ಷಕ್ಕೆ ಸುಮಾರು 500 ಕೋಟಿ ರೂಪಾಯಿ ಭ್ರಷ್ಟಾಚಾರ ಎಸಗುತ್ತಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘ ಮಾಡಿರುವ ಆರೋಪ ಅತ್ಯಂತ ಗಂಭೀರವಾಗಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಈ ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಿ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.


Related Articles

Back to top button