ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬೆಳಗಾವಿ ಖಡೇಬಜಾರ್ ಪೊಲಿಸ್ ಠಾಣೆಯಲ್ಲಿ ಮೃತ ರುದ್ರಣ್ಣ ತಾಯಿ ನೀಡಿರುವ ದೂರಿನ ಅನ್ವಯ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ತಹಶೀಲ್ದಾರ್ ಬಸವರಾಜ್ ನಾಗರಾಳ, ಸೋಮು ಹಾಗೂ ಅಶೋಕ್ ಕಬ್ಬಲಿಗೇರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ರುದ್ರಣ್ಣ ಆತ್ಮಹತ್ಯೆಗೂ ಮುನ್ನ ತನ್ನ ಸಾವಿಗೆ ಮೂವರು ಕಾರಣ ಎಂದು ವಾಟ್ಸಪ್ ಗ್ರೂಪ್ ನಲ್ಲಿ ಮೆಸೇಜ್ ಮಾಡಿದ್ದರು. ಅಲ್ಲದೇ ತಾಯಿ ಮಲ್ಲವ್ವ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ