ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಮುಡಾ ಪ್ರಕರಣದ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಮೈಸೂರು ತಲುಪಿಇದ್ದು, ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮುಖ್ಯಮಂತ್ರಿಗಳನ್ನು ಸುದೀರ್ಘ ವಿಚಾರಣೆ ನಡೆಸಲಿದ್ದಾರೆ.
40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ತಮ್ಮ ಸರ್ಕಾರಿ ವಾಹನನ ಬಿಟ್ಟು ಬೆಂಗಳೂರಿನಿಂದ ಖಾಸಗಿ ಕಾರಿನಲ್ಲಿ ಮೈಸೂರಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಕೆಲವೇ ಕ್ಷಣಗಳಲ್ಲಿ ಮೈಸೂರು ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ