ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ, ವಿಚಾರಣೆ ಎದುರಿಸಿ ಹೊರಬಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಲೋಕಾಯುಕ್ತ ವಿಚಾರಣೆ ಅಂತ್ಯವಾಗಿದೆ. ಲೋಕಾಯುಕ್ತ ನೋಟಿಸ್ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ ಸತತ ಎರಡು ಗಂಟೆಗಳ ಕಾಲ ಲೋಕಾಯುಕ್ತ ಅಧಿಕಾರಿಗಳಿಂದ ವಿಚಾರಣೆ ಎದುರಿಸಿದರು. ಮೂಡಾ ಸೈಟ್ ವಿಚಾರವಾಗಿ ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದರು. ಸಿಎಂ ಅವರಿಂದ ಉತ್ತರವನ್ನು ಅಧಿಕಾರಿಗಳು ಪಡೆದಿದ್ದಾರೆ. ಮಧ್ಯಾಹ್ನ 12 ಗಂಟೆಯವರೆಗೆ ವಿಚಾರಣೆ ನಡೆಸಲಾಗಿದೆ.
12 ಗಂಟೆ ಬಳಿಕ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ಕಚೇರಿಯಿಂದ ಹೊರಬಂದಿದ್ದು, ಮೈಸೂರಿನ ಅತಿಥಿ ಗೃಹಕ್ಕೆ ತೆರಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ