ಪ್ರಗತಿವಾಹಿನಿ ಸುದ್ದಿ: ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅಮೆರಿಕದ 47ನೇ ಅಧ್ಯಕ್ಷರಾಗಿ ಟ್ರಂಪ್ ಪಟ್ಟಕ್ಕೇರಿದ್ದಾರೆ.
ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದು, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೋಲನುಭವಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಕೇವಲ ನಾಲ್ಕು ವರ್ಷಗಳಲ್ಲೇ ಡೊನಾಲ್ಡ್ ಟ್ರಂಪ್ ಪುನರಾಯ್ಕೆ ಆಗಿದ್ದು, ಶ್ವೇತಭವನವನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಫಾಕ್ಸ್ ನ್ಯೂಸ್ ತಿಳಿಸಿತ್ತು. ಇದೀಗ ಡೊನಾಲ್ಡ್ ಟ್ರಂಪ್ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ 270 ಮ್ಯಾಜಿಕ್ ಸಂಖ್ಯೆ. 277 ಮತಗಳ ಮೂಲಕ ಭರ್ಜರಿ ಗೆಲುವು ಸಾಧಿಸುವ ಮೂಲಕ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಅಮೆರಿಕ ಅಧ್ಯಕ್ಷ ಪಟ್ಟಕ್ಕೇರಿದ್ದಾರೆ. ಕಮಲಾ ಹ್ಯಾರಿಸ್ 226 ಮತಗಳನ್ನು ಪಡೆದಿದ್ದಾರೆ.
ಈ ವೇಳೆ ಮಾತನಾಡಿದ ಟ್ರಂಪ್, ನನಗೆ ನಿರೀಕ್ಷೆಗೂ ಮೀರಿ ಜನ ಬೆಂಬಲ ಸಿಕ್ಕಿದೆ. ಅಧ್ಯಕ್ಷನಾಗಿ ಆಯ್ಕೆ ಮಾಡಿ ಮತ್ತೆ ನನಗೆ ಶಕ್ತಿ ತುಂಬಿದ್ದಾರೆ. ಸ್ಪಷ್ಟ ಬೆಂಬಲ ನೀದಿದ ಅಮೆರಿಕ ಜನತೆಗೆ ಧನ್ಯವಾದಗಳು. ನನಗೆ ಸಾಥ್ ನೀಡಿದ ಪತ್ನಿ ಹಾಗೂ ಮಕ್ಕಳಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ