ಪ್ರಗತಿವಾಹಿನಿ ಸುದ್ದಿ: ವೈದ್ಯನೊಬ್ಬ ಕುಡಿದ ಮತ್ತಿನಲ್ಲಿ ಯುವತಿಯೊಬ್ಬಳಿಗೆ 4-5 ಇಂಜಕ್ಷನ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಯುವತಿಯೊಬ್ಬರು ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಡಾ.ಪ್ರದೀಪ್ ಹಾಗೂ ನರ್ಸ್ ಮಹೇಂದ್ರ ಕುಡಿದ ಮತ್ತಿನಲ್ಲಿದ್ದರು. ಈ ವೇಳೆ ನರ್ಸ್ ಮಹೇಂದ್ರ ಯುವತಿಗೆ ಇಂಜಕ್ಷನ್ ನಿಡಿದ್ದಾನೆ. ಬಳಿಕ ಡಾ.ಪ್ರದೀಪ್ ನನ್ನು ಕರೆದು ಚಿಕಿತ್ಸೆ ಕೊಡುವಂತೆ ಹೇಳಿದ್ದಾನೆ. ಇಂಜಕ್ಷನ್ ಹಿಡಿದು ಬಂದ ಡಾ.ಪ್ರದೀಪ್ ಯುವತಿಯ ಮೈಕೈಗೆ 4-5 ಬಾರಿ ಇಂಜಕ್ಷನ್ ಚ್ಚುಚ್ಚಿದ್ದಾನೆ. ಅಲ್ಲದೇ ಅಸಭ್ಯವಾಗಿ ವರ್ತಿಸಿದ್ದಾನೆ.
ಯುವತಿಯ ಪೋಷಕರು ವೈದ್ಯ ಹಾಗೂ ನರ್ಸ್ ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕುಡಿದ ಮತ್ತಿನಲ್ಲಿದ್ದ ವೈದ್ಯ ಸ್ಥಳದಿಂದ ಪರಾರಿಯಾಗಿದ್ದಾನೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಆಸ್ಪತ್ರೆಯೊಂದರಲ್ಲಿ ಈ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ