Karnataka News

*ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡಾ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ ಆಗಿದೆ.

ಇಂದು ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಹೈಕೋರ್ಟ್ ಮತ್ತೆ ಶಾಕ್ ನೀಡಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 21ಕ್ಕೆ ಮುಂದೂಡಿದೆ.

ಈ ಹಿಂದೆ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ 57ನೇ ಸಿಸಿಹೆಚ್ ಕೋರ್ಟ್ ವಜಾಗೊಳಿಸಿತ್ತು. ಈ ನಿಟ್ಟಿನಲ್ಲಿ ಜಾಮೀನಿಗಾಗಿ ಹೈಕೊರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ. ಸದ್ಯ ಪವಿತ್ರಾ ಗೌಡಗೆ ಜೈಲುವಾಸವೇ ಗತಿಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button