Politics

*ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹಾವೇರಿ ಜಿಲ್ಲೆಯ ಹನಗೇರಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆಗೆ ವಕ್ಫ್ ನೋಟಿಸ್ ಕಾರಣ. ರೈತನ ಜಮೀನಿನ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಕ್ಕೆ ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಈ ವರದಿಯನ್ನೂ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮೂಲಕ ಹಂಚಿಕೊಂಡಿದ್ದರು. ಆದರೆ ರೈತನ ಆತ್ಮಹತ್ಯೆಗೆ ಸಾಲಭಾದೆ ಕಾರಣ ಎಂದು ತಿಳಿದುಬಂದಿದೆ.

ಜಿಲ್ಲಾಡಳಿತ ಹಾಗೂ ಪೊಲೀಸರು ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ಸುಳ್ಳು ಮಾಹಿತಿಯನ್ನು ಹರಡಿದ ಆರೋಪದಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button