Belagavi NewsBelgaum NewsSports

*ರಾಷ್ಟ್ರೀಯ ಶೂಟಿಂಗ್ ಚಾಂಪಿನಯ್ ಶಿಪ್ ನಲ್ಲಿ ಚಿನ್ನದ ಪದಕ: ರಾಜ್ಯಕ್ಕೆ ಕೀರ್ತಿ ತಂದ ಯುವ ಶೂಟರ್ ಆಕಾಶ ಗುಡಗೇನಟ್ಟಿ*

ಜಿವಿ ಮವಲಂಕರ್ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ದಲ್ಲಿ ಎನ್‌ಸಿಸಿ ಕೆಡೆಟ್ ಆಕಾಶ ಗುಡಗೇನಟ್ಟಿ ಚಿನ್ನದ ಪದಕ ಗೆದ್ದಿದ್ದಾರೆ.

ಕೆಎಲ್‌ಇ ಸಂಸ್ಥೆಯ ಲಿಂಗರಾಜ ಕಾಲೇಜಿನ ಬಿಎ ವಿದ್ಯಾರ್ಥಿ ಹಾಗೂ ಎನ್‌ಸಿಸಿ ಘಟಕದ ಸೀನಿಯರ್ ಅಂಡರ್ ಆಫೀಸರ್ ಆಕಾಶ ಸತೀಶ್ ಗುಡಗೇನಟ್ಟಿ ಕೇರಳದ ತಿರುವನಂತಪುರಂನಲ್ಲಿ ಜರುಗಿದ 33ನೇ ಜಿ ವಿ ಮವಲಂಕರ್ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಫ್ ಹಾಗೂ ನ್ಯಾಷನಲ್ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾ ಹಮ್ಮಿಕೊಂಡಿದ್ದ ಶೂಟಿಂಗ್‌ದಲ್ಲಿ ಚಿನ್ನದ ಪದಕವನ್ನು ಪಡೆದು ಅದ್ವಿತೀಯ ಸಾಧನೆ ಮಾಡಿದ್ದಾನೆ. ಶೂಟಿಂಗ್‌ದಲ್ಲಿ 600 ಅಂಕಗಳಲ್ಲಿ 535 ಅಂಕಗಳನ್ನು ಪಡೆಯುವ ಮೂಲಕ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾನೆ.

ಭಾರತಾದ್ಯಂತದ 18 ಯುವ ಶೂಟರ್‌ಗಳು ಅಂತಿಮ ಹಂತದ ಸ್ಪರ್ಧಿಸಿದ್ದರು. ಈ ಕಠಿಣ ಶೂಟಿಂಗ್ ಪಂದ್ಯಾವಳಿಯಲ್ಲಿ ಆಕಾಶ್ ಗುಡಗೇನಟ್ಟಿ ಅವರು ಅದ್ಭುತ ಶೂಟಿಂಗ್ ಕೌಶಲವನ್ನು ತೋರ್ಪಡಿಸಿ ಚಿನ್ನಕ್ಕೆ ಕೊರಳೊಡ್ಡಿದ್ದರೆ, ಜೂನಿಯರ್ ವಿಭಾಗದಲ್ಲಿಯೂ ಅಷ್ಟೇ ಕಠಿಣ ಸ್ಪರ್ಧೆಯನ್ನು ಎದುರಿಸಿ ಆಕಾಶ್ ಮತ್ತೊಂದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಟಿದ್ದಾರೆ. 26 ಕರ್ನಾಟಕ ಎನ್‌ಸಿಸಿ ಬಟಾಲಿಯನ್ ಎನ್‌ಸಿಸಿ ಕೆಡೆಟ್ ಆಗಿರುವ ಕೆಡೆಟ್ ಆಕಾಶ ಜಿವಿ ಮವಲಂಕರ್ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಫ್‌ದ ಜೂನಿಯರ್ ಹಾಗೂ ಸೀನಿಯರ್ ಎರಡು ಶೂಟಿಂಗ್ ವಿಭಾಗದಲ್ಲಿ ಚಿನ್ನದ ಪದಕವನ್ನು ಗಳಿಸುವ ಮೂಲಕ ಈ ಸಾಧನೆ ಮಾಡಿದ ರಾಜ್ಯದ ಪ್ರಥಮ ಎನ್‌ಸಿಸಿ ಕೆಡೆಟ್ ಎಂಬ ಅಭಿದಾನಕ್ಕೆ ಪಾತ್ರನಾಗಿ ರಾಜ್ಯಕ್ಕೇ ಕೀರ್ತಿಯನ್ನು ತಂದಿದ್ದಾರೆ. ಜುಲೈದಲ್ಲಿ ತಮಿಳುನಾಡಿನಲ್ಲಿ ಜರುಗಿದ ನವದೆಹಲಿ ಡಿಜಿಎನ್‌ಸಿಸಿ ಶೂಟಿಂಗ್ ಚಾಂಪಿಯನಶಿಫ್‌ದಲ್ಲಿಯೂ ಅಗ್ರ ಶ್ರೇಯಾಂಕವನ್ನು ಪಡೆದುಕೊಂಡು 33ನೇ ಜಿ.ವಿ.ಮವಲಂಕರ್ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಫ್‌ಗೆ ಆಯ್ಕೆಯಾಗಿದ್ದು ವಿಶೇಷವಾಗಿತ್ತು.

ವಿದ್ಯಾರ್ಥಿಯ ಈ ಸಾಧನೆಗೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ, ಬೆಳಗಾವಿ ಗ್ರುಫ್ ಕಮಾಂಡರ್ ಕರ್ನಲ್ ಮೋಹನ್ ನಾಯ್ಕ, ೨೬ ಕರ್ನಾಟಕ ಎನ್‌ಸಿಸಿ ಬಟಾಲಿಯನ್ ಕಮಾಡಿಂಗ್ ಆಫೀಸರ್ ಲೆಫ್ಟನಂಟ್ ಕರ್ನಲ್ ಸುನೀಲ ದಾಗರ, ಎಡಮ್ ಆಫೀಸರ್ ಲೆಫ್ಟನಂಟ್ ಕರ್ನಲ್ ಸಿದ್ದಾರ್ಥ ರೆಡೂ ಶಂಕರ ಯಾದವ್, ಸುಬೇದಾರ್ ಮೇಜರ್ ಕಲ್ಲಪ್ಪಾ ಪಾಟೀಲ, ಕೆಎಲ್‌ಇ ಜಂಟಿ ಕಾರ್ಯದರ್ಶಿ ಡಾ.ಪ್ರಕಾಶ್ ಕಡಕೋಳ, ಕಾಲೇಜಿನ ಪ್ರಾಚಾರ್ಯ ಡಾ.ಎಚ್.ಎಸ್.ಮೇಲಿನಮನಿ, ಪಿಯು ಪ್ರಾಚಾರ್ಯೆ ಗಿರಿಜಾ ಹಿರೇಮಠ, ಕಾಲೇಜಿನ ಎನ್‌ಸಿಸಿ ಅಧಿಕಾರಿ ಕ್ಯಾಫ್ಟನ್ ಡಾ.ಮಹೇಶ ಗುರನಗೌಡರ ಹಾಗೂ ಸಿಬ್ಬಂದಿವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button