Belagavi NewsBelgaum NewsPolitics

ಕಾರ್ಯಕರ್ತರೇ ಪಕ್ಷದ ಜೀವಾಳ: ಮುರುಗೇಶ್ ನಿರಾಣಿ

ಪ್ರಗತಿವಾಹಿನಿ ಸುದ್ದಿ: ದೇಶದ  ಪ್ರಗತಿಗೋಸ್ಕರ ಮುನ್ನಡೆಯುತ್ತಿರುವ ಭಾರತೀಯ ಜನತಾ ಪಾರ್ಟಿ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಹೇಳಿದರು.  

ಬೆಳಗಾವಿ ನಗರದ ಧರ್ಮನಾಥ ಭವನ ಹತ್ತಿರವಿರುವ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲೆ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪದಾಧಿಕಾರಿಗಳ  ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದ ಮುಖ್ಯಮಂತ್ರಿ ಹಾಗೂ ಸಚಿವರು ಅಭಿವೃದ್ಧಿ ಮರೆತು ಭ್ರಷ್ಟಾಚಾರ,ಹಣ ಲೂಟಿ ಹೊಡೆಯುವುದರಲ್ಲಿ ನಿರತರಾಗಿದ್ದಾರೆ. ಇಂತವರಿಂದ ರಾಜ್ಯದ ಅಭಿವೃದ್ಧಿ ಕನಸಿನ ಮಾತಾಗಿದೆ ಎಂದು ಹೇಳಿದರು. 

Home add -Advt

ನಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ ಪಕ್ಷದ ಮುಂಬರುವ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿ ಮಾತನಾಡಿ ಎಲ್ಲ ಕಾರ್ಯಕರ್ತರು ರಾಜ್ಯ ಭೃಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ಮತ್ತು ದುರಾಡಳಿತ ವಿರುದ್ಧ ಹೋರಾಡಲು ಸನ್ನದ್ಧರಾಗಿ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಸತೀಶ್ ಅಪ್ಪಾಜಿಗೋಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾದಮ್ಮನವರ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ, ಮುರುಗೇಂದ್ರಗೌಡ ಪಾಟೀಲ್, ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೊಲಕಾರ, ಜಿಲ್ಲಾ ಮಾಧ್ಯಮ ಸಹ ಪ್ರಮುಖ ಬಾಳೇಶ ಚವ್ವನ್ನವರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ್ ಚಿನ್ನಪ್ಪಗೌಡ್ರ, ಈರಣ್ಣ ವಾರದ,ಸುನಿಲ್ ಮರಕುಂಬಿ, ಪ್ರಶಾಂತ್ ಅಮ್ಮಿನಭಾವಿ,ಮನೋಜ್ ಪಾಟೀಲ್, ಬಸವರಾಜ್ ನೇಸರಗಿ, ವಿಠ್ಠಲ್ ಸಾಯಣ್ಣವರ, ವೀರಭದ್ರ ಪೂಜಾರಿ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button