Latest

*ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿ: ಐವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.

ಮಥುರಾದಿಂದ ಲಖನೌಗೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇಯ ಥಾನಾ ನಸೀರ್ ಬಳಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಸ್ ಚಾಲಕ ನಿದ್ದೆಮಂಪರಿನಲ್ಲಿ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button