Latest

*ಮುಲ್ಕಿಯಲ್ಲಿ ಕೊಲೆ ಮತ್ತು ಆತ್ಮಹತ್ಯೆ ಕೇಸ್: ಕುಟುಂಬಸ್ಥರೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕಳೆದ ಎರಡು ದಿನಗಳ ಹಿಂದೆಯಷ್ಟೇ ಸಹಕಾರಿ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ ಮೊದಲು ಪತ್ನಿ ಪ್ರಿಯಾಂಕ ಹಾಗೂ ಪುತ್ರ ಹೃದಯ್ ನನ್ನು ಕೊಲೆ ಮಾಡಿ ಬಳಿಕ ಮಂಗಳೂರಿನ ಮುಲ್ಕಿ ಹೊರ ವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಕಾರ್ತಿಕ್ ನ ತಂದೆ, ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಎಂಬುವವರನ್ನು ಬಂಧಿಸಲಾಗಿದೆ. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್ ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ನಮ್ಮ ಸಂಸಾರ ಹಾಳು ಮಾಡಿದ್ದೇ ತಂದೆ, ತಾಯಿ, ಸಹೋದರಿ. ಇಂತಹ ತಂದೆ, ತಾಯಿ ಯಾರಿಗೂ ಸಿಗಬಾರದು. ನನ್ನ ಈ ಪರಿಸ್ಥಿತಿಗೆ ಇವರೇ ಕಾರಣ, ದಯವಿಟ್ಟು ನಮ್ಮ ಅಂತ್ಯಸಂಸ್ಕಾರವನ್ನು ಅತ್ತೆ ಮಾವ ನಡೆಸಿಕೊಡಬೇಕು ಎಂದು ಡೆತ್ ನೋಟ್‌ನಲ್ಲಿ ಮೃತ ಕಾರ್ತಿಕ್ ಬರೆದುಕೊಂಡಿದ್ದ.

ಅಲ್ಲದೇ ಈ ಬಗ್ಗೆ ಮೃತ ಪ್ರಿಯಾಂಕಾ ಪೋಷಕರು ಕೂಡ ಕಾರ್ತಿಕ್ ಕುಟುಂಬದವರ ಮೇಲೆ ದೂರು ನೀಡಿದ್ದು, ಅತ್ತೆ ಮಾವನ ಕಿರುಕುಳದಿಂದಲೇ ಈ ಘಟನೆ ನಡೆದಿರುವುದು ಎಂದು ಆರೋಪಿಸಲಾಗಿದೆ. ಸದ್ಯ ಪ್ರಿಯಾಂಕಾ ಕುಟುಂಬಸ್ಥರ ದೂರಿನ ಮೇರೆಗೆ ಹಾಗೂ ಡೆತ್ ನೋಟ್ ಆದಾರದ ಮೇಲೆ ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಕಳೆದ ಎರಡು ದಿನಗಳ ಹಿಂದೆಯಷ್ಟೇ ಸಹಕಾರಿ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ ಮೊದಲು ಪತ್ನಿ ಪ್ರಿಯಾಂಕ ಹಾಗೂ ಪುತ್ರ ಹೃದಯ್ ನನ್ನು ಕೊಲೆ ಮಾಡಿ ಬಳಿಕ ಮಂಗಳೂರಿನ ಮುಲ್ಕಿ ಹೊರ ವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button